BengaluruPolitics

ಎಲೆಕ್ಷನ್‌ ಬಾಂಡ್‌ ಪ್ರಕರಣ; ನಿರ್ಮಲಾ ಸೀತಾರಾಮ್‌ ವಿರುದ್ಧ ಎಫ್‌ಐಆರ್‌ಗೆ ಸೂಚನೆ

ಬೆಂಗಳೂರು; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.. ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸುವ ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿ ಸುಲಿಗೆ ಆರೋಪದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ..
ಚುನಾವಣಾ ಬಾಂಡ್​ಗಳ ಮೂಲಕ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕಾರಣದಿಂದಲೇ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಈ ಚುನಾವಣಾ ಬಾಂಡ್‌ ಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿತ್ತು.. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಎಂಬುವವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಖಾಸಗಿ ದೂರು ನೀಡಿದ್ದರು.. ಈ ದೂರಿನ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ನೀಡಿದೆ..
42ನೇ ಎಸಿಎಂಎಂ ಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಿತು.. ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚನೆ ನೀಡಿರುವ ಕೋರ್ಟ್‌ ಎಫ್‌ಐಆರ್‌ ದಾಖಲಿಸುವಂತೆ ಸೂಚನೆ ಕೊಟ್ಟಿದೆ.. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. ವಿಚಾರಣೆಯನ್ನು ಅಕ್ಟೋಬರ್‌ 0ಕ್ಕೆ ಮುಂದೂಡಲಾಗಿದೆ.

Share Post