Politics

ಪ್ರಜ್ವಲ್‌ ವಿರುದ್ಧದ ಆಶ್ಲೀಲ ವಿಡಿಯೋ ಪ್ರಕರಣ; ಅಮಿತ್‌ ಶಾ ಅಚ್ಚರಿ ಹೇಳಿಕೆ!

ಹಾಸನದಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳಿರುವ ಪೆನ್‌ ಡ್ರೈವ್‌ಗಳು ಭಾರಿ ಸದ್ದು ಮಾಡುತ್ತಿವೆ.. ಇತ್ತ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ.. ಈ ಬೆನ್ನಲ್ಲೇ ಮಿತ್ರ ಪಕ್ಷ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.. ಹೀಗಿರುವಾಗಲೇ ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿದ್ದಾರೆ.. ಈ ಬಗ್ಗೆ ಅವರು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ..

ಅಸ್ಸಾಂನ ಗುವಾಹಟಿಯಲ್ಲಿ ಮಾತನಾಡಿರುವ ಅಮಿತ್‌ ಶಾ ಅವರು, ಆ ಕೃತ್ಯ ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ.. ಈ ಪ್ರಕರಣ ಬಗ್ಗೆ ಕರ್ನಾಟಕ ಸರ್ಕಾರ ಯಾಕೆ ಶೀಘ್ರವಾಗಿ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ..

ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಗೌರವವನ್ನು ನೀಡುತ್ತೇವೆ.. ಹೀಗಾಗಿ ಮಹಿಳೆಯರ ಘನತೆಗೆ ಧಕ್ಕೆ ತರುವವರನ್ನು ನಾವು ಎಂದಿಗೂ ಕ್ಷಮಿಸುವುದಿಲ್ಲ.. ಅಂತಹ ಘಟನೆಗಳನ್ನು ನಾವು ಖಂಡಿಸುತ್ತೇವೆ.. ನಾರಿಶಕ್ತಿಯ ಅಪಮಾನ ಮಾಡುವವರ ಪರವಾಗಿ ನಾವು ಎಂದಿಗೂ ನಿಲ್ಲುವುದಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ..

 

Share Post