ಅಂತಿಮ ಘಟ್ಟಕ್ಕೆ ತಲುಪಿದ ಪರಿಷತ್ ಮತದಾನ: ಡಿ.14ಕ್ಕೆ ಮತಎಣಿಕೆ
ಬೆಂಗಳೂರು: ಸಂಜೆ ೪ ಗಂಟೆಗೆ ವಿಧಾನಪರಿಷತ್ ಚುನಾವಣೆಯ ಮತದಾನ ಮುಗಿಯಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶಾಸಕರು, ಸಂಸದರು ಸೇರಿದಂತೆ ವಿವಿಧ ಗಣ್ಯರು ಮತ ಚಲಾಯಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಮತ ಚಲಾವಣೆ ಮಾಡಿದರು. ವಿಧಾನ ಪರಿಷತ್ ಸಭಾನಾಯಕ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿ ಒಟ್ಟು 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ರಾಜಕೀಯ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪೈಕಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಕಣದಲ್ಲಿರುವ ಏಕೈಕ ಮಹಿಳೆ. ಒಟ್ಟು 98,846 ಮತದಾರರಿದ್ದು, ಸಂಜೆ ೪ ಗಂಟೆಗೆ ಮತದಾನ ಮುಗಿಯಲಿದೆ. ಡಿಸೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಇವತ್ತು ಯಾರ್ಯಾರು ಮತ ಚಲಾಯಿಸಿರು ನೋಡೋಣ ಬನ್ನಿ..
ವಿಜಯಪುರ-ಬಾಗಲಕೋಟೆ ವಿಧಾನಪರಿಷತ್ ಕ್ಷೇತ್ರ ವ್ಯಾಪ್ತಿಯ ಬೀಳಗಿ ಪಟ್ಟಣದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಮತದಾನ ಮಾಡಿದರು.
ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಗೆ ಬೀಳಗಿಯ ಪಟ್ಟಣ ಪಂಚಾಯಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಹಕ್ಕು ಚಲಾಯಿಸಿದರು.
ಬೆಳಗಾವಿ ಮಹಾನಗರ ಪಾಲಿಕೆ ಮತಗಟ್ಟೆ ಸಂಖ್ಯೆ 161ರಲ್ಲಿ, ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಸಮಯ ನೋಡಿಕೊಂಡೇ ಹಕ್ಕು ಚಲಾಯಿಸಿದರು.
ಬೆಳಗಾವಿ ವಿಧಾನಪರಿಷತ್ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಳಗಾವಿ ಮಹಾನಗರಪಾಲಿಕೆ ಕಚೇರಿ ಮತಗಟ್ಟೆಯಲ್ಲಿ ಶುಕ್ರವಾರ ಮತ ಚಲಾಯಿಸಿದರು.
ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸ್ಥಾಪಿಸಿದ ಮತಗಟ್ಟೆಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಮತ ಚಲಾಯಿಸಿದರು.
ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸ್ಥಾಪಿಸಿದ ಮತಗಟ್ಟೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಕ್ಕು ಚಲಾಯಿಸಿದರು.
ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸ್ಥಾಪಿಸಿದ ಮತಗಟ್ಟೆಯಲ್ಲಿ ಶಾಸಕ ಅರವಿಂದ ಬೆಲ್ಲದ ಮತದಾನ ಮಾಡಿದರು.
ಇಂದು ಬೀಳಗಿ ಮತಕ್ಷೇತ್ರದ ಬೀಳಗಿ ಪಟ್ಟಣ ಪಂಚಾಯಿತಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಮತದಾನ ಮಾಡಿದರು.