Politics

ವೃದ್ಧರು , ಅಂಗವಿಕಲರು ಮನೆಯಿಂದಲೇ ಮತ ಚಲಾಯಿಸಿ : ಚುನಾವಣಾ ಆಯೋಗ

ಲಕ್ನೌ : ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಇದೇ ಮೇ ತಿಂಗಳಲ್ಲಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಮತದಾರರ ಹಿತದೃಷ್ಟಿಯಿಂದ ಚುನಾವಣಾ ಆಯೋಗ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ೮೦ ವರ್ಷ ಮೇಲ್ಪಟ್ಟ ವೃದ್ಧರು, ಅಂಗವಿಕಲರು ಮನೆಯಿಂದಲೇ ಮತ ಚಲಾಯಿಸಬಹುದೆಂದು ಚುನಾವಣಾ ಆಯೋಗ ತಿಳಿಸಿದೆ.

ಉತ್ತರ ಪ್ರದೇಶದ ಚುನಾವಣೆ ಕುರಿತು ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ಮಾತನಾಡಿ, ಮೇ ೧೪ಕ್ಕೆ ಹಾಲಿ ಸರ್ಕಾರದ ಅವಧಿ ಮುಗಿಯಲಿದೆ. ನಂತರ ಯಾವುದೇ ತಡ ಮಾಡದೆ ಚುನಾವಣೆ ನಡೆಸಲು ಸಜ್ಜಾಗುತ್ತಿದ್ದೇವೆ. ಕೊವಿಡ್‌ನ ಎಲ್ಲಾ ನಿಬಂಧನೆಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Share Post