BengaluruPolitics

CM Janaspandana; ಸಿಎಂ ಮುಂದೆ ಜನರ ಗೋಳು; ಕಣ್ಣೀರಿಟ್ಟು ನೆರವಿಗಾಗಿ ಗೋಗರೆಯುತ್ತಿರುವ ಜನ!

ಬೆಂಗಳೂರು; ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಸಾವಿರಾರು ಮಂದಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ವಿಕಲಚೇತನರು, ವಯೋವೃದ್ಧರು, ಅನಾಥರು ಹೀಗೆ ಸಾವಿರಾರು ಮಂದಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಬೆಳಗ್ಗೆಯಿಂದಲೇ ಜನರನ್ನು ಭೇಟಿ ಮಾಡುತ್ತಿದ್ದು, ಅವರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಸಾಧ್ಯವಾದರೆ ಸ್ಥಳದಲ್ಲೇ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ವೇಳೆ ಹಲವಾರು ವಿಕಲಚೇತನರು ವೀಲ್‌ ಚೇರ್‌ ನಲ್ಲೇ ಬಂದು ಸಿಎಂ ಭೇಟಿಯಾಗಿತ್ತಿದ್ದಾರೆ. ಕೆಲವು ಮಹಿಳೆಯರಂತೂ ಕಣ್ಣೀರಿಟ್ಟು ಸಿಎಂ ಸಿದ್ದರಾಮಯ್ಯ ಅವರ ಮುಂದೆ ತಮ್ಮ ಗೋಳು ತೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ;Keragodu Issue; ಹೋರಾಟದಿಂದ ಜೆಡಿಎಸ್‌ ಪಕ್ಷ ಅಂತರ..?; ನಾಳೆ ಮಂಡ್ಯ ಬಂದ್‌ ಆಗುತ್ತಾ..?

ಜನಸ್ಪಂದನ ಹೈಲೈಟ್ಸ್‌ ಏನು..?

ಜನಸ್ಪಂದನ ಹೈಲೈಟ್ಸ್‌ ಏನು..?; ಹಿಂದಿನ ರಾತ್ರಿಯೇ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ದೂರದೂರುಗಳಿಂದ ಜನ ಆಗಮಿಸಿದ್ದು, ಬೆಳಿಗ್ಗೆ 8.30 ಗಂಟೆಗೇ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ, ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಕಂದಾಯ ಇಲಾಖೆಯ ಕೌಂಟರಿನಲ್ಲಿ ನಿರೀಕ್ಷೆಗೂ ಮೀರಿ ಜನರು ಸೇರಿದ್ದನ್ನು ಕಂಡು, ಕೂಡಲೇ ಆಯೋಜಕರು ಇನ್ನೊಂದು ಕೌಂಟರ್‌ ತೆರೆದು ಜನರಿಗೆ ಆಸನ ವ್ಯವಸ್ಥೆ ಮಾಡಿದರು.

ಬಿಗಿ ಪೊಲೀಸ್‌ ಬಂದೋಬಸ್ತ್

ಪೊಲೀಸ್‌ ಬಂದೋಬಸ್ತ್; ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಒಟ್ಟು 936 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 8 ಎಸಿಪಿ, 23 ಇನ್ಸ್‌ಪೆಕ್ಟರ್‌, 58 ಸಬ್‌ ಇನ್ಸ್‌ಪೆಕ್ಟರ್‌, 205 ಪೊಲೀಸ್‌ ಕಾನ್ಸ್‌ಟೇಬಲ್‌, 142 ಮಹಿಳಾ ಪೊಲೀಸ್‌ ಸಿಬ್ಬಂದಿ, 500 ಹೋಂ ಗಾರ್ಡ್‌ಗಳನ್ನು ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ.

ಇದನ್ನೂ ಓದಿ; Congress Delhi Protest; ಕೇಂದ್ರ ಸರ್ಕಾರ ಚಿನ್ನದ ಮೊಟ್ಟೆ ಇಡುವ ಕೋಳಿ ಕುಯ್ಯುತ್ತಿದೆ; ಸಿದ್ದರಾಮಯ್ಯ

ಜನರಿಗೆ ಪರಿಹಾರ ಒದಗಿಸಲು ಜನಸ್ಪಂದನ

ಜನರಿಗೆ ಪರಿಹಾರ ಒದಗಿಸಲು ಜನಸ್ಪಂದನ: ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ;Farmers Suicide; ರಾಜ್ಯದಲ್ಲಿ ಹೆಚ್ಚಾಯ್ತು ರೈತರ ಆತ್ಮಹತ್ಯೆ ಪ್ರಕರಣಗಳು; 9 ತಿಂಗಳಲ್ಲಿ 601 ರೈತರ ಆತ್ಮಹತ್ಯೆ!

3 ತಿಂಗಳಲ್ಲಿ ಅರ್ಜಿಗಳ ವಿಲೇವಾರಿಗೆ ಸಿಎಂ ಸೂಚನೆ

3 ತಿಂಗಳಲ್ಲಿ ಅರ್ಜಿಗಳ ವಿಲೇವಾರಿಗೆ ಸಿಎಂ ಸೂಚನೆ; ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮ್ಸಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

ಇದನ್ನೂ ಓದಿ;Mandya Politics; ಮಂಡ್ಯದಲ್ಲಿ ಮತ್ತೆ ಸುಮಲತಾ-ನಿಖಿಲ್‌ ಕುಮಾರಸ್ವಾಮಿ ಫೈಟ್‌..?

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಜ್ಯದ ನಾಯಕರು ಈಗ ಕೊಟ್ಟು ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದಾರೆ. ಇದು ಬಡವರ ಕಾರ್ಯಕ್ರಮ. ಜೊತೆಗೆ ಅಸಮಾನತೆ ಹೋಗಲಾಡಿಸಲು ಮಾಡಿದ ಕಾರ್ಯಕ್ರಮಗಳು. ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು. ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ನುಡಿದರು.

Share Post