ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಖರ್ಗೆ ದಿಢೀರ್ ಬೆಂಗಳೂರು ಭೇಟಿ!
ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.. ರಾಜ್ಯಪಾಲರ ಆದೇಶದ ಹಿನ್ನೆಲೆಯಲ್ಲಿ ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಆಖಾಡಕ್ಕೆ ಧುಮುಕಿದ್ದಾರೆ.. ವಿಚಾರ ಗೊತ್ತಾಗುತ್ತಿದ್ದಂತೆ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ..
ಇದನ್ನೂ ಓದಿ; ಮುಡಾ ಹಗರಣ; ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದೇನು..?
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಲಿರುವ ಮಲ್ಲಿಕಾರ್ಜುನ ಖರ್ಗೆಯವರು ಅಲ್ಲಿಗೇ ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲಾ ನಾಯಕರನ್ನೂ ಕರೆಸಿಕೊಳ್ಳಲಿದ್ದಾರೆ.. ಮುಂದಿನ ಹೋರಾಟದ ಕುರಿತಾಗಿ ಅವರು ಚರ್ಚೆ ನಡೆಸಿದ್ದಾರೆ.. ಒಂದು ಕಡೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಕೈಬಿಡಬಾರದು ಅವರ ಪರವಾಗಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಕರೆ ನೀಡಿದೆ.. ಈ ಬೆನ್ನಲ್ಲೇ ಖರ್ಗೆಯವರು ರಾಜ್ಯಕ್ಕೆ ಬರುತ್ತಿದ್ದ, ಮುಂದಿನ ಹೆಜ್ಜೆಗಳು ಹೇಗಿರಲಿವೆ ಎಂಬುದರ ಬಗ್ಗೆ ಕುತೂಹಲ ಕೆರಳಿಸಿದೆ..
ಇದನ್ನೂ ಓದಿ; ಮುಡಾ ಪ್ರಕರಣ; ಸಿಎಂ ವಿರುದ್ಧ ತನಿಖೆ ಹೇಗೆ ನಡೆಯುತ್ತೆ..?