NationalPolitics

ವಿದೇಶದಿಂದ ವಾಪಸ್ಸಾಗುತ್ತಲೇ ಪ್ರಧಾನಿ ಮೋದಿ ಮಹತ್ವದ ಸಭೆ

ನವದೆಹಲಿ; ಅಮೆರಿಕ, ಈಜಿಪ್ಟ್‌ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ. ಭಾರತಕ್ಕೆ ಬರುತ್ತಿದ್ದಂತೆ ಅವರು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಮಣಿಪುರದ ಪರಿಸ್ಥಿತಿ ಸೇರಿದಂತೆ ಹಲವು ವಿದ್ಯಮಾನಗಳ ಬಗ್ಗೆ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ತಿಳಿದುಕೊಂಡಿದ್ದಾರೆ.

ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಅಧಿಕಾರಿಗಳು ಕೂಡಾ ಸಭೆಯಲ್ಲಿ ಭಾಗವಹಿಸಿ ಮಣಿಪುರ ಘಟನೆ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಒದಗಿಸಿದರು. ಇದಕ್ಕೂ ಮೊದಲು ಮೋದಿಯವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದರು.

Share Post