CrimePolitics

ಪ್ರಜ್ವಲ್ ರೇವಣ್ಣ ಮನವಿಯನ್ನು ತಿರಸ್ಕರಿಸಿದ ಎಸ್ಐಟಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮನವಿಯನ್ನು ಎಸ್ಐಟಿ ತಿರಸ್ಕರಿಸಿದೆ..  ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಗೆ ನೋಟಿಸ್ ಜಾರಿ ಮಾಡಲಾಗಿತ್ತು. ಅದ್ರೆ ಪ್ರಜ್ವಲ್ ವಿದೇಶದಲ್ಲಿರುವುದರಿಂದ ಅವರ ವಕೀಲರ ಮೂಲಕ ಏಳು ದಿನಗಳ ಕಾಲಾವಕಾಶ ಕೋರಿದ್ದರು. ಇದನ್ನು ಎಸ್ಐಟಿ ತಂಡ ತಿರಸ್ಕಾರ ಮಾಡಿದೆ. ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಇನ್ನೂ ಕಾಲಮಿತಿಯನ್ನು ಖಚಿತಪಡಿಸಿಲ್ಲ.

  ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸಾವಿರಾರು ವಿಡಿಯೋಗಳಿರುವ ಪೆನ್ ಡ್ರೈವ್ ಸಾಕಷ್ಟು ಸದ್ದು ಮಾಡಿತ್ತು. ಈ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಮೊಮ್ಮಗ ಮೂವತ್ಮೂರು ವರ್ಷದ ರೇವಣ್ಣ ಮತ್ತು ಅವರ ತಂದೆ ಹೆಚ್‌ಡಿ ರೇವಣ್ಣ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿ, ದೂರು ನೀಡಿದ್ದಾರೆ.

   ರೇವಣ್ಣ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿರುವ ಮಹಿಳೆ, ಜೆಡಿಎಸ್ ಸಂಸದ ತನ್ನ ಮಗಳಿಗೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ವಿಡಿಯೋಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಿದೆ.

Share Post