Politics

ಉತ್ತರ ಪ್ರದೇಶ ಸಿಎಂ ಅಭ್ಯರ್ಥಿ ವಿಚಾರ; ಉಲ್ಟಾ ಹೊಡೆದ ಪ್ರಿಯಾಂಕಾಗಾಂಧಿ ವಾದ್ರಾ

ದೆಹಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಕುರಿತಂತೆ ಅಚ್ಚರಿ ಹೇಳಿಕೆ ಕೊಟ್ಟಿದ್ದ ಪ್ರಿಯಾಂಕಾಗಾಂಧಿ ವಾದ್ರಾ ಈಗ ಉಲ್ಟಾ ಹೊಡೆದಿದ್ದಾರೆ. ನಿನ್ನೆಯಷ್ಟೇ ದೆಹಲಿಯಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಈ ವೇಳೆ, ಸುದ್ದಿಗಾರರು, ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯಾರ ಮುಖವನ್ನು ಕಾಣಲು ಬಯಸುತ್ತೀರಾ ಎಂದು ಪ್ರಶ್ನಿಸಿದ್ದರು. ಅದಕ್ಕೆ ನಗುತ್ತಾ ಉತ್ತರಿಸಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ, ನೀವು ನನ್ನ ಮುಖವನ್ನೇ ನೋಡಬಹುದು..? ನಾನು ಕಾಣುತ್ತಿಲ್ಲವೇ..? ಎಂದು ಪ್ರಶ್ನಿಸಿದ್ದರು. ಆ ಮೂಲಕ ಉತ್ತರ ಪ್ರದೇಶಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗುವಂತೆ ನೋಡಿಕೊಂಡಿದ್ದರು. ಆದ್ರೆ ಇವತ್ತು ಪ್ರಿಯಾಂಕಾ ತನ್ನ ವರಸೆಯನ್ನು ಬದಲಾಯಿಸಿದ್ದಾರೆ.

ಇವತ್ತು ಹೇಳಿಕೆ ನೀಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ನಾನು ಉತ್ಪ್ರೇಕ್ಷೆಯಾಗಿ ಆ ರೀತಿಯ ಹೇಳಿಕೆ ಕೊಟ್ಟೆ. ನಾನು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಆದ್ರೆ ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾಗಾಂಧಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ತಾವೇ ಮುಂದೆ ನಿಂತು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇದುಇವರೆಗೂ ಘೋಷಣೆ ಮಾಡಿಲ್ಲ. ಇದನ್ನೆಲ್ಲಾ ನೋಡಿದರೆ, ಪ್ರಿಯಾಂಕಾ ಉತ್ತರ ಪ್ರದೇಶದಲ್ಲಿ ಸಿಎಂ ಆಗಲು ಆಸಕ್ತಿ ತೋರಿಸುತ್ತಿದ್ದಾರೆ ಎಂದೇ ಭಾವಿಸಬಹುದು.

 

Share Post