BengaluruPolitics

ರಾಜ್ಯದಲ್ಲಿ ಪ್ರಾಸಿಕ್ಯೂಷನ್‌ ಬಿರುಗಾಳಿ; ಬುಧವಾರ ಕಾಂಗ್ರೆಸ್‌ ಶಾಸಕಾಂಗ ಸಭೆ!

ಬೆಂಗಳೂರು; ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅಸ್ತ್ರದ ಪ್ರಯೋಗವಾಗಿದೆ.. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡೋದಷ್ಟೇ ಸಿದ್ದರಾಮಯ್ಯ ಮುಂದಿನ ಆಯ್ಕೆ.. ಹೈಕೋರ್ಟ್‌ನಲ್ಲೂ ರಾಜ್ಯಪಾಲರ ಆದೇಶಕ್ಕೆ ತಡೆ ಸಿಗಲಿಲ್ಲ ಅಂದ್ರೆ ಸುಪ್ರೀಂಕೋರ್ಟ್‌ಗೆ ಹೋಗಬೇಕು.. ಅಲ್ಲೂ ಆಗಲಿಲ್ಲ ಅಂದ್ರೆ ವಿಚಾರಣೆ ಎದುರಿಸಲೇಬೇಕು.. ಇಂತಹ ಸಂದರ್ಭದಲ್ಲಿ ಬಂಧನವಾದರೂ ಅಚ್ಚರಿ ಇಲ್ಲ.. ಹೀಗಾಗಿ ಕಾಂಗ್ರೆಸ್‌ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ..

ಇದನ್ನೂ ಓದಿ; ಬೆಂಗಳೂರಿನಲ್ಲಿ ಯುವತಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ!

ರಾಜಕೀಯ ಒತ್ತಡಕ್ಕೆ ಮಣಿದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಅಂತ ಕಾಂಗ್ರೆಸ್‌ ಆರೋಪ ಮಾಡುತ್ತಿದೆ.. ಒಂದು ಕಡೆ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಬೀದಿಗಿಳಿದು ಹೋರಾಟ ಮಾಡೋದಕ್ಕೂ ಕರೆ ನೀಡಲಾಗಿದೆ.. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.. ಈ ಹಿನ್ನೆಲೆಯಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ..

ಇದನ್ನೂ ಓದಿ; ಇದು ಷಡ್ಯಂತ್ರ, ಯಾವ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಈಗ ಶಾಸಕರು, ಸಚಿವರ ಬಲ ಬೇಕು.. ಹೀಗಾಗಿ ಎಲ್ಲಾ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋದಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ.. ಅದಕ್ಕಾಗಿಯೇ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.. ರಾಜ್ಯಪಾಲರ ಆದೇಶದ ವಿರುದ್ಧ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.. ಜೊತೆಗೆ ಪ್ರಕರಣದ ಬಗ್ಗೆ ಶಾಸಕರಿಗೆ ಮತ್ತೆ ಸಂಪೂರ್ಣವರಿಕೆ ಮಾಡಿಕೊಡಲು ತೀರ್ಮಾನ ಮಾಡಲಾಗಿದೆ.. ಈ ಮೂಲಕ ಕಾಂಗ್ರೆಸ್‌ನ ಎಲ್ಲಾ ಶಾಸಕರ ಬೆಂಬಲ ಪಡೆಯೋಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ..

ಇದನ್ನೂ ಓದಿ; ಮುಡಾ ಹಗರಣ; ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದ್ದೇನು..?

Share Post