ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ; ಪ್ರಿಯಾಂಕಾ ಹಿಂದೆ ಸರಿದಿದ್ದೇಕೆ..?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿ ಈ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದರು.
ರಾಹುಲ್ ಗಾಂಧಿ ಅವರು ಅಮೇಥಿ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಗೆದ್ದಿದ್ದಾರೆ. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಎದುರು ಸೋತಿದ್ದರು.
ಆದರೆ, ಕೇರಳ ರಾಜ್ಯದ ವಯನಾಡಿನಿಂದ ಸಂಸದರಾಗಿ ಲೋಕಸಭೆಗೆ ಹೋಗಿದ್ದರು. ಈ ಬಾರಿಯೂ ರಾಹುಲ್ ಗಾಂಧಿ ವಯನಾಡಿನಲ್ಲಿ ಸ್ಪರ್ಧಿಸಿದ್ದಾರೆ. ವಯನಾಡಿನಲ್ಲಿ ಈಗಾಗಲೇ ಮತದಾನ ಮುಗಿದಿದೆ.. ಇದೀಗ ಅವರು ರಾಯ್ ಬರೇಲಿಯಿಂದಲೂ ಸ್ಪರ್ಧೆಗೆ ಇಳಿದಿದ್ದಾರೆ..
ಆದ್ರೆ, ಅಮೇಥಿ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಡಲಾಗಿದೆ.. ಗಾಂಧಿ ಕುಟುಂಬಕ್ಕೆ ನಿಕಟವಾಗಿರುವ ಕಿಶೋರಿ ಲಾಲ್ ಶರ್ಮಾ ಅವರು ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಹೇಳಿಕೆ ಬಿಡುಗಡೆ ಮಾಡಿದೆ.
ಪ್ರಿಯಾಂಕಾ ಗಾಂಧಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಅವರ ಬದಲಾಗಿ ಕಿಶೋರಿ ಲಾಲ್ ಶರ್ಮಾಗೆ ಟಿಕೆಟ್ ನೀಡಲಾಗಿದೆ..