Notice; ರಾಹುಲ್, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್; ಖುದ್ದು ಹಾಜರಿಗೆ ಆದೇಶ!
ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಳೆದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಹಲವು ಅಪಪ್ರಚಾರಗಳನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ 42ನೇ ACMM ಕೋರ್ಟ್ ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ನಿರ್ಣಯ; ಪ್ರತಿಪಕ್ಷ ನಾಯಕ ಆರ್.ಅಶೋಕ್
ಮಾರ್ಚ್ 28ಕ್ಕೆ ಖುದ್ದು ಹಾಜರಿಗೆ ಸೂಚನೆ;
ಮಾರ್ಚ್ 28ಕ್ಕೆ ಖುದ್ದು ಹಾಜರಿಗೆ ಸೂಚನೆ; ಚುನಾವಣೆ ಸಮಯದಲ್ಲಿ 40 ಪರ್ಸೆಂಟ್ ಕಮೀಷನ್, ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು ಸೇರಿದಂತೆ ಹಲವು ಆರೋಪಗಳನ್ನು ಮಾಡಲಾಗಿತ್ತು. ಸಂಬಂಧ ಬಿಜೆಪಿ ವತಿಯಿಂದ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಬೆಂಗಳೂರಿನ ಬೆಂಗಳೂರಿನ 42ನೇ ACMM ಕೋರ್ಟ್ ಮೂವರೂ ನಾಯಕರಿಗೆ ಸಮನ್ಸ್ ನೀಡಿದೆ. ಅಷ್ಟೇ ಅಲ್ಲದೆ ಮಾರ್ಚ್ 28ರಂದು ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಖುದ್ದು ಕೋರ್ಟ್ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ; BBMP; ಆಸ್ತಿ ತೆರಿಗೆ ಬಾಕಿ ವಿಚಾರ; ಒನ್ ಟೈಮ್ ಸೆಟ್ಲ್ ಮೆಂಟ್ ಸೌಲಭ್ಯ
ಬಿಜೆಪಿ ವಿರುದ್ಧದ ಅಪಪ್ರಚಾರದಿಂದ ಮಾನಹಾನಿ;
ಬಿಜೆಪಿ ವಿರುದ್ಧದ ಅಪಪ್ರಚಾರದಿಂದ ಮಾನಹಾನಿ; ನಮ್ಮ ವಿರುದ್ಧ ಚುನಾವಣೆ ಸಮಯದಲ್ಲಿ ಅಪಪ್ರಚಾರ ಮಾಡಲಾಗಿದೆ. ಪೇಸಿಎಂ ಎಂದು ಪೋಸ್ಟರ್‌ಗಳನ್ನು ಹಂಚಲಾಗಿದೆ. ಭ್ರಷ್ಟಾಚಾರದ ಬಗ್ಗೆ ರೇಟ್ ಕಾರ್ಡ್ ಎಂದು ಜಾಹೀರಾತು ನIಡಲಾಗಿದೆ. ಇದರಿಂದಾಗಿ ಪಕ್ಷದ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಬಿಜೆಪಿ ದೂರಿದೆ. ಈ ಸಂಬಂಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್. ಶಿವಪ್ರಸಾದ್ ದೂರು ಕೊಟ್ಟಿದ್ದರು. ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ದೂರನ್ನು ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.
ಹಾಜರಾಗ್ತಾರಾ ಮೂವರೂ ನಾಯಕರು..?;
ಹಾಜರಾಗ್ತಾರಾ ಮೂವರೂ ನಾಯಕರು..?; ಈ ದೂರು ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಾಲಯ ಪ್ರತಿವಾದಿಗಳ ವಿರುದ್ಧ ಮಾನಹಾನಿ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ಹೀಗಾಗಿ, ಮೂವರೂ ನಾಯಕರು ಖುದ್ದು ಕೋರ್ಟ್ ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪೋಸ್ಟರ್ ಅಭಿಯಾನ ನಡೆಸಿದ್ದರು. ನಂತರ ಜಾಹೀರಾತುಗಳ ಮೂಲಕ ಬಿಜೆಪಿ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದ್ದರು.ಪ್ರತಿ ಭಾಷಣದಲ್ಲೂ 40 ಪರ್ಸೆಂಟ್ ಕಮೀಷನ್ ಬಗ್ಗೆ ಮಾತನಾಡಿದ್ದರು.
ಇದನ್ನೂ ಓದಿ;Ragi malt; 55 ಲಕ್ಷ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಣೆಗೆ ಚಾಲನೆ