NationalPolitics

ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್‌ ಘೋಷಣೆ

ಗಾಂಧೀನಗರ; ಟೀಂ ಇಂಡಿಯಾ ಆಟಗಾರ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಗುಜರಾತ್‌ನ ಜಾಮ್‌ನಗರ್‌ ಉತ್ತರ ವಿಧಾನಸಭಾ ಕ್ಷೇತ್ರದಿಂದ ರವೀಂದ್ರ ಜಡೇಜಾ ಪತ್ನಿ ಬಿಜೆಪಿ ಹುರಿಯಾಳಾಗಿ ಕಣಕ್ಕಿಳಿಯಲಿದ್ದಾರೆ.

ನಿನ್ನೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಿತ್ತು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಈ ಸಭೆಯಲ್ಲಿ ನೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಜಾಮ್ನಗರ್‌ ಉತ್ತರ ಕ್ಷೇತ್ರಕ್ಕೆ ರವೀಂದ್ರ ಜಡೇಜಾ ಪತ್ನಿಗೆ ಟಿಕೆಟ್‌ ಖಾಯಂ ಮಾಡಲಾಗಿದೆ.

Share Post