Politics

ಶೀಘ್ರದಲ್ಲೇ 10 ಸಾವಿರ ಶಾಲಾ ಶಿಕ್ಷಕರ ನೇಮಕ; ಸಚಿವ ಮಧು ಬಂಗಾರಪ್ಪ

ಬೆಂಗಳೂರು; ರಾಜ್ಯದಲ್ಲಿ 10 ಸಾವಿರ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.. ಮುಂಗಾರು ಅಧಿವೇಶನದ ಮೊದಲ ದಿನದ ಕಲಾಪದಲ್ಲಿ ಅವರು ಉತ್ತರ ನೀಡಿದರು.. ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ತಳವಾರ್‌ ಸಾಬಣ್ಣ ಅವರ ಪ್ರಶ್ನೆಗೆ ಉತ್ತರ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದರು..

ಇದನ್ನೂ ಓದಿ; ಬಿಳಿ ಉಪ್ಪು, ಪಿಂಕ್‌ ಸಾಲ್ಟ್‌ ಹಾಗೂ ಬ್ಲ್ಯಾಕ್‌ ಸಾಲ್ಟ್‌ ನಡುವಿನ ವ್ಯತ್ಯಾಸವೇನು..?; ಯಾವುದು ಬೆಸ್ಟ್‌..?

ತಳವಾರ್‌ ಸಾಬಣ್ಣ ಅವರು ಮಾತನಾಡುತ್ತಾ, ಕಲ್ಯಾಣ ಕರ್ನಾಟಕ ಭಾಗದಲ್ಲಿ 19 ಸಾವಿರ ಶಿಕ್ಷಕರ ಕೊರತೆ ಇದೆ.. ಜೊತೆಗೆ ಕೊಠಡಿಗಳ ಸಮಸ್ಯೆ ಕೂಡಾ ಇದೆ ಎಂದು ಹೇಳಿದರು.. ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಅವರು ರಾಜ್ಯದಲ್ಲಿ ಒಟ್ಟು 50 ಸಾವಿರ ಶಿಕ್ಷಕರ ಕೊರತೆ ಇದೆ.. ಹೀಗಾಗಿ 10 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪತ್ರ ನೀಡಿದ್ದೇವೆ. ಒಪ್ಪಿಗೆ ಸಿಕ್ಕ ತಕ್ಷಣ ನೇಮಕ ಮಾಡುತ್ತೇವೆ. ಇದರಲ್ಲಿ 6500 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುವುದು ಎಂದು ಹೇಳಿದರು..

ಇದನ್ನೂ ಓದಿ; ಡ್ರಗ್ಸ್‌ ಕೇಸ್‌ನಲ್ಲಿ ನಟಿ ರಕುಲ್‌ ಪ್ರೀತ್‌ಸಿಂಗ್‌ ಸಹೋದರ ಅರೆಸ್ಟ್‌!

Share Post