Politics

ನಿರ್ಭಯಾ ಗ್ಯಾಂಗ್‌ರೇಪ್‌ ಪ್ರಕರಣದ ವಕೀಲೆ BSPಗೆ ಸೇರ್ಪಡೆ

‌ಲಖನೌ: 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬದ ಪರವಾಗಿ ಕಾನೂನು ಹೋರಾಟ ನಡೆಸಿದ್ದ ವಕೀಲೆ ಸೀಮಾ ಕುಶ್ವಾ ಇಂದು ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ಲಖನೌನ ಬಿಎಸ್‌ಪಿ ಕಚೇರಿಯಲ್ಲಿ ಸಸೀಮಾ ಕುಶ್ವಾ ಅವರಿಗೆ ಅಂಬೇಡ್ಕರ್‌ ಭಾವಚಿತ್ರ ಹಾಗೂ ಬಿಎಸ್‌ಪಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ವಕೀಲೆ ಸೀಮಾ ಕುಶ್ವಾ ಅವರು, ಬಿಎಸ್‌ಪಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ದೆಹಲಿ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಸೀಮಾ ಕುಶ್ವಾ ಅವರು ಸಂತ್ರಸ್ತೆಯ ಕುಟುಂಬದ ಪರವಾಗಿ ನಿಂತಿದ್ದರು. ಕೋರ್ಟ್‌ನಲ್ಲಿ ಸಮರ್ಥವಾಗಿ ವಾದಿಸಿ, ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು.

 

 

 

 

Share Post