ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ಪ್ರತ್ಯೇಕ ಸಭೆ
ನವದೆಹಲಿ; ಇಷ್ಟು ಹೊತ್ತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಒಟ್ಟಿಗೆ ಕೂರಿಸಿ ಮಾತುಕತೆ ನಡೆಯುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೆ, ಮಲ್ಲಿಕಾರ್ಜುನ ಖರ್ಗೆ ಯವರು ಇಬ್ಬರೂ ನಾಯಕರಿಗೂ ಪ್ರತ್ಯೇಕ ಸಮಯ ಕೊಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಂಜೆ 5 ಗಂಟೆಗೆ ಮಲ್ಲಿಕಾರ್ಜುಖರ್ಗೆಯವರ ಭೇಟಿಗೆ ಅವಕಾಶ ಸಿಕ್ಕಿದೆ. ಖರ್ಗೆಯವರು ಡಿ.ಕೆ.ಶಿವಕುಮಾರ್ ಜೊತೆ ಒಂದು ಗಂಟೆ ಕಾಲ ಚರ್ಚೆ ನಡೆಸಲಿದ್ದಾರೆ.
ಅನಂತರ ಸಂಜೆ 6 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಲಾಗಿದೆ. ಸಿದ್ದರಾಮಯ್ಯ ಅವರ ಜೊತೆಗೂ ಖರ್ಗೆ ಒಂದು ಗಂಟೆ ಕಾಲ ಚರ್ಚೆ ಮಾಡಲಿದ್ದಾರೆ. ಅನಂತರ ಇಬ್ಬರನ್ನೂ ಒಟ್ಟಿಗೆ ಕೂರಿಸಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಳಗ್ಗೆ ರಾಹುಲ್ ಗಾಂಧಿ ಜೊತೆ ನಡೆದ ಸಭೆಯಲ್ಲಿ ಸೂತ್ರವೊಂದರನ್ನು ಸಿದ್ಧ ಮಾಡಿದ್ದು, ಅದನ್ನು ಇಬ್ಬರೂ ನಾಯಕರಿಗೆ ಖರ್ಗೆ ವಿವರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇವತ್ತು ರಾತ್ರಿ ವೇಳೆಗೆ ಒಂದು ಒಮ್ಮತದ ತೀರ್ಮಾನ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.