ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಡಿಸಿಎಂ..?; ನಾಳೆಯೇ ನಡೆಯುತ್ತಾ ಪ್ರಮಾಣ..?
ನವದೆಹಲಿ; ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದಂತೆ ಕಾಣುತ್ತಿದೆ. ಸಿದ್ದರಾಮಯ್ಯ ಅವರು ಸಿಎಂ ಆಗೋದು ಪಕ್ಕಾ ಎಂಬ ಮಾಹಿತಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬೆಂಗಳೂರಿನ ಸಿಎಂ ನಿವಾಸದ ಮುಂದೆ ಈಗಾಗಲೇ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತಿದೆ. ಜೊತೆಗೆ ಸಿದ್ದರಾಮಯ್ಯ ಬೆಂಬಲಿಗರು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ನಾಳೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂದಿನ ವಾರ ಮಂತ್ರಿಮಂಡಲ ರಚನೆಯಾಗಲಿದೆ ಎಂದು ತಿಳಿದುಬಂದಿದೆ.
ನಾಳೆ ಮಧ್ಯಾಹ್ನ 3.30ಕ್ಕೆ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರಿಗೆ ಡಿಸಿಎಂ ಜೊತೆ ಹಲವು ಪ್ರಮುಖ ಖಾತೆಗಳನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.