NationalPolitics

ಮೆಗಾಪ್ಲ್ಯಾನ್‌ ಜೊತೆ ದೆಹಲಿಯತ್ತ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌

ಬೆಂಗಳೂರು; ನಿನ್ನೆ ಸಚಿವ ಸಂಪುಟ ಸಭೆ ಕರೆದು ರಾಜ್ಯಪಾಲರಿಗೆ ಕುಮಾರಸ್ವಾಮಿ ಸೇರಿದಂತೆ ಇತರರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಆಗ್ರಹ ಪೂರ್ವಕ ಮನವಿ ಮಾಡಲು ನಿರ್ಧಾರ ಮಾಡಲಾಗಿದೆ.. ಇತ್ತ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲು ತೀರ್ಮಾನ ಮಾಡಿದ್ದಾರೆ.. ಇತ್ತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಇಂದು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ, ಮುಡಾ ಪ್ರಕರಣ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ..

ಇದನ್ನು ಓದಿ; ರಾಜ್ಯಪಾಲರಿಗೆ ಸಲಹೆ ನೀಡುವ ಅಧಿಕಾರ ಸಂಪುಟಕ್ಕಿದೆಯಾ..?

ಇಂದು ಸಂಜೆ ಮೊದಲಿಗೆ ಇಬ್ಬರೂ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.. ಅವರಿಗೆ ಮುಡಾ ಹಗರಣದ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲಿದ್ದಾರೆ.. ಇದರ ಜೊತೆಗೆ ರಾಜ್ಯಪಾಲರ ಬಳಿ ಇರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧದ ಅರ್ಜಿಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.. ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಪ್ರತಿಗಳನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ.. ಸಂಜೆ 4 ಗಂಟೆಗೆ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ಮೈಸೂರು ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ!

ಖರ್ಗೆ ಭೇಟಿ ನಂತರ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಲಿದ್ದಾರೆ.. ಬಿಜೆಪಿ ಪಕ್ಷ ರಾಜ್ಯಪಾಲರುಗಳನ್ನು ಹೇಗೆಲ್ಲಾ ದುರುಪಯೋಗ ಮಾಡಿಕೊಳ್ಳುತ್ತಿದೆ.. ಎನ್‌ಡಿಎಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೇಗೆಲ್ಲಾ ರಾಜ್ಯಪಾಲರನ್ನು ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಹಾಗೂ ರಾಜ್ಯದಲ್ಲಿ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಮಾಹಿತಿಯನ್ನು ರಾಹುಲ್‌ ಗಾಂಧಿ ಹಾಗೂ ಸೋನಿಯಾಗಾಂಧಿಗೆ ವಿವರಣೆ ನೀಡಲಿದ್ದಾರೆ.. ಈ ಮೂಲಕ ಈ ವಿಚಾರವನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ನಡೆಸುವುದು, ರಾಷ್ಟ್ರಪತಿಯವರನ್ನು ಭೇಟಿಯಾಗಿ ಈ ಬಗ್ಗೆ ದೂರು ನೀಡುವ ಸಲುವಾಗಿ ಮಾತುಕತೆ ನಡೆಯಲಿದೆ ಎಂದು ಹೇಳಲಾಗುತ್ತಿದೆ..

Share Post