BengaluruNationalPolitics

ಆ.23ಕ್ಕೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ!; ಏನಿದು ಹೊಸ ಟ್ವಿಸ್ಟ್‌..?

ಬೆಂಗಳೂರು(Bengaluru); ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಇದನ್ನು ವಿರೋಧಿ ಕಾಂಗ್ರೆಸ್‌ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ.. ಇದರ ಜೊತೆಯಲ್ಲೇ ನಾಳೆ ರಾಜ್ಯಪಾಲರ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗುತ್ತಿದೆ.. ಇದರ ಜೊತೆಯಲ್ಲೇ ಬುಧವಾರ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.. ಇದೆಲ್ಲಾ ಕುತೂಹಲಗಳ ನಡುವೆ ಸಿದ್ದರಾಮಯ್ಯ ಅವರು ಆಗಸ್ಟ್‌ 23ರ ಶುಕ್ರವಾರ ದೆಹಲಿಗೆ ತೆರಳಲು ತೀರ್ಮಾನಿಸಿದ್ದಾರೆ.. ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ..

ಇದನ್ನೂ ಓದಿ; ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ!

ನಾಳೆ ಹೈಕೋರ್ಟ್‌ನಲ್ಲಿ ಸಿಎಂ ರಿಟ್‌ ಅರ್ಜಿ ಸಲ್ಲಿಸಲಿದ್ದಾರೆ.. ಆಗಸ್ಟ್‌ 20ರಂದು ಟಿ.ಜೆ.ಅಬ್ರಹಾಂ ಸೇರಿ ಮೂವರು ಸಲ್ಲಿಸಿರುವ ಅರ್ಜಿಗಳು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.. ಇದಕ್ಕೂ ಮುಂಚೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದರೆ ಸಿಎಂ ಸಿದ್ದರಾಮಯ್ಯ ಕಾನೂನು ಕಂಟಕದಿಂದ ಪಾರಾಗಬಹುದು.. ಹೀಗಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್‌ 23ರಂದು ದೆಹಲಿಗೆ ತೆರಳುತ್ತಿದ್ದಾರೆ..

ಇದನ್ನೂ ಓದಿ; ಬಸ್ಸು, ವ್ಯಾನ್‌ ಮುಖಾಮುಖಿ ಡಿಕ್ಕಿ; 10 ಮಂದಿ ದುರ್ಮರಣ, 27 ಮಂದಿ ಗಂಭೀರ!

ಕೆಲ ದಿನಗಳ ಹಿಂದೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ ಎಲ್ಲಾ ಮಾಹಿತಿ ನೀಡಿದ್ದರು.. ಇದೀಗ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.. ಇದರಿಂದ ಮುಂದೆ ಆಗಬಹುದಾದ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಿದ್ದಾರೆ.. ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಅವರು ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.. ಇನ್ನು ಹಿರಿಯ ವಕೀಲರನ್ನು ಕೂಡಾ ಭೇಟಿ ಮಾಡಿ ಪ್ರಕರಣದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಅಡ್ಜಸ್ಟ್‌ಮೆಂಟ್‌ ರಾಜಕೀಯ ಸೇಡಿನ ರಾಜಕೀಯವಾಗಿ ಬದಲಾಗ್ತಿದೆಯಾ..?

ಇನ್ನು ರಾಷ್ಟ್ರಪತಿಗಳ ಭೇಟಿಗೆ ಅನುಮತಿ ಪಡೆದು, ರಾಷ್ಟ್ರಪತಿಗಳನ್ನು ಭೇಟಿಯಾಗಿ ರಾಜ್ಯಪಾಲರ ನಡೆ ವಿರುದ್ಧ ದೂರು ಕೊಡುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.. ಸೋಮವಾರ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಿದ್ದು, ಹೈಕೋರ್ಟ್‌ ರಾಜ್ಯಪಾಲರ ಆದೇಶಕ್ಕೆ ತಡೆ ನೀಡದೇ ಹೋದರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಈಗಾಗಲೇ ತೀರ್ಮಾನಿಸಲಾಗಿದೆ.. ಈ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ನೀಡಿರುವುದರ ಜೊತೆಗೆ ರಾಜ್ಯಪಾಲರ ತೀರ್ಮಾನ ರಾಜಕೀಯ ಪ್ರೇರಿತ ಎಂಬುದನ್ನು ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..

Share Post