Politics

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ಗೆ ಲೀಡ್‌ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಪ್ರದೀಪ್‌ ಈಶ್ವರ್‌

ಬೆಂಗಳೂರು; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವೋಟು ಲೀಡ್‌ ಪಡೆದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿರು ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ.. ಇದರಲ್ಲಿ ಎರಡನೇ ಮಾತಿಲ್ಲ ಎಂದು ಹೇಳಿದರು..

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಅವರ ಸೋಲು ಖಚಿತ. ನಾನು ಈ ಹಿಂದೆ ಸವಾಲು ಹಾಕಿದ್ದೆ, ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ಗಿಂತ ಒಂದು ವೋಟು ಜಾಸ್ತಿ ಪಡೆಯಲಿ ಎಂದು. ಒಂದು ವೇಳೆ ಅವರು ಕಾಂಗ್ರೆಸ್‌ಗಿಂತ ಒಂದು ಓಟು ಜಾಸ್ತಿ ಪಡೆದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ..

 

Share Post