ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಸಮನ್ಸ್; ಖುದ್ದು ಹಾಜರಿಗೆ ಸೂಚನೆ!
ಬೆಂಗಳೂರು; ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಆಗಸ್ಟ್ 29ರಂದು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ.. ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆ ಖಂಡಿಸಿ ನಡೆಸಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.. ಈ ಪ್ರಕರಣ ಸಂಬಂಧ ಖುದ್ದು ಹಾಜರಿಗೆ ಕೋರ್ಟ್ ಸಿಎಂ ಹಾಗೂ ಡಿಸಿಎಂಗೆ ಸೂಚನೆ ನೀಡಿದೆ..
ಇದನ್ನೂ ಓದಿ; ಬೆಂಗಳೂರಿನಲ್ಲಿ ನಾಪತ್ತೆಯಾದ 485 ಹುಡುಗಿಯರ ಪತ್ತೆಯೇ ಇಲ್ಲ!
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ನಡೆದ ಹಣದ ಅಕ್ರಮ ವರ್ಗಾವಣೆ ಪ್ರಕರಣವನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಇದರಲ್ಲಿ ಅಧಿಕಾರಿಗಳು ರಾಹುಲ್ ಗಾಂಧಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು.. ಈ ಪ್ರತಿಭಟನೆ ಕಾನೂನು ಬಾಹಿರ ಎಂದು 2022ರಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಇಬ್ಬರೂ ನಾಯಕರ ವಿರುದ್ಧ ಕೇಸ್ ದಾಖಲು ಮಾಡಿದ್ದರು.. ಇದರ ಜೊತೆಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ಓದಿ; ಯೂಟ್ಯೂಬ್ ನೋಡಿ ಬಾಂಬ್ ತಯಾರಿ ಯತ್ನ; ಸ್ಫೋಟಗೊಂಡ 5 ಮಕ್ಕಳಿಗೆ ಗಾಯ!
2022 ಜೂನ್ 16ರಂದು ಕಾಂಗ್ರೆಸ್ ಪ್ರತಿಭಟನೆಗೆ ಕರೆ ಕೊಟ್ಟಿತ್ತು.. ಪೊಲೀಸರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದರು.. ಆದ್ರೆ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಹಮ್ಮಿಕೊಂಡಿದ್ದರು.. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ಕೇಸ್ ದಾಖಲು ಮಾಡಲಾಗಿತ್ತು.