ಪ್ರಗತಿ, ಅಭಿವೃದ್ಧಿಗೆ ತೆಲಂಗಾಣ ಜನರ ಬೆಂಬಲ; ಡಿ.ಕೆ.ಶಿವಕುಮಾರ್
ಹೈದರಾಬಾದ್; ತೆಲಂಗಾಣದ ಜನ ಪ್ರಗತಿ ಹಾಗೂ ಅಭಿವೃದ್ಧಿಗೆ ಮತ ನೀಡಿದ್ದಾರೆ ಎಂದು ಕರ್ನಾಟಕ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹೈದರಾಬಾದ್‌ನ ಗಾಂಧಿ ಭವನದಲ್ಲಿ ನಡೆದ ವಿಜಯೋತ್ಸವದ ವೇಳೆ ಅವರು ಮಾತನಾಡಿದರು.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಅವರೇ ನಮ್ಮ ತಂಡ ನಾಯಕ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಾಮೂಹಿಕ ನಾಯಕತ್ವದ ಮೇಲೆ ನಾವು ಚುನಾವಣೆ ಎದುರಿಸಿದ್ದೇವೆ. ನಮ್ಮ ನಾಯಕರ ಒಗ್ಗಟ್ಟಿನ ಹೋರಾಟದಿಂದ ಈ ಗೆಲುವು ಸಿಕ್ಕಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.