Politics

ದೇವೇಗೌಡರ ಮೊಮ್ಮಗ ಸೂರಜ್‌ಗೆ ಭರ್ಜರಿ ಗೆಲುವು

ಹಾಸನ: ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಜನಪ್ರತಿನಿಧಿಯಾಗಿದ್ದಾರೆ. ಹಾಸನ ವಿಧಾನಪರಿಷತ್‌ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್‌.ಡಿ.ರೇವಣ್ಣ ಅವರ ಪುತ್ರ ಸೂರಜ್‌ ರೇವಣ್ಣ ಗೆಲುವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಸೂರಜ್‌ ಅವರ ಗೆಲುವು ಖಾತ್ರಿಯಾಗಿದೆ.

1433 ಮತಗಳ ಅಂತರದಿಂದ ಸೂರಜ್‌ ರೇವಣ್ಣ ಗೆಲುವು ಸಾಧಿಸಿದ್ದು, ಅವರು ಒಟ್ಟು 2242 ಮತಗಳನ್ನು ಪಡೆದಿದ್ದಾರೆ. ಮೊದಲ ಅಗ್ನಿಪರೀಕ್ಷೆಯಲ್ಲೇ ಸೂರಜ್‌ ರೇವಣ್ಣ ಗೆಲುವು ಸಾಧಿಸಿದ್ದು, ವಿಧಾನಪರಿಷತ್‌ ಪ್ರವೇಶಿಸುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಂಕರ್ 731 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ, ಬಿಜೆಪಿ ಅಭ್ಯರ್ಥಿ‌ ಎಚ್‌.ಎಂ.ವಿಶ್ವನಾಥ್‌ 354 ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

 

Share Post