NationalPolitics

ತೆಲಂಗಾಣ ಚುನಾವಣೆ; ಜನಗಾಂವ್‌ನಲ್ಲಿ ಕಾರ್ಯಕರ್ತರ ಮಾರಾಮಾರಿ

ಹೈದರಾಬಾದ್; ತೆಲಂಗಾಣ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದ್ದರೂ, ಅಲ್ಲಲ್ಲಿ ಅಹಿತಕರ ಘಟನೆಗಳೂ ನಡೆದಿವೆ. ಜನಗಾಂವ್‌ ಗ್ರಾಮದ ಮತಗಟ್ಟೆಯಲ್ಲಿ ಮೂರೂ ಪ್ರಮುಖ ಪಕ್ಷಗಳ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಒಬ್ಬರಿಗೊಬ್ಬರು ನೂಕಾಟ, ತಳ್ಳಾಟ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಜನಗಾಂವ್‍ನ ಮತಗಟ್ಟೆಯಲ್ಲಿ ಕಾಂಗ್ರೆಸ್ , ಬಿಜೆಪಿ ಹಾಗೂ ಬಿಆರ್ ಎಸ್ ಕಾರ್ಯಕರ್ತರ ನಡುವೆ ವಾಗ್ಯುದ್ಧ ನಡೆದಿದೆ. ಇದೇ ಒಬ್ಬರಿಗೊಬ್ಬರು ತಳ್ಳಾಡಿದ್ದಾರೆ. ಕೈಕೈ ಮಿಲಾಯಿಸಿದ್ದಾರೆ ಕೂಡಾ. ಪೊಲೀಸರು ಮಧ್ಯಪ್ರವೇಶ ಮಾಡಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ವೀಡಿಯೊದಲ್ಲಿ, ರಾಜಕೀಯ ಪಕ್ಷಗಳ ಕಾರ್ಯಕರ್ತರು ಜನಾಂವ್‍ನ ಮತಗಟ್ಟೆಯ ಹೊರಗೆ ಪರಸ್ಪರ ತಳ್ಳುತ್ತಿರುವುದನ್ನು ಕಾಣಬಹುದು. ಆದರೆ ಕಾರ್ಯಕರ್ತರ ನಡುವಿನ ಗಲಾಟೆಗೆ ನಿಖರ ಕಾರಣ ಗೊತ್ತಾಗಿಲ್ಲ.

Share Post