NationalPolitics

ತೆಲಂಗಾಣ ಚುನಾವಣೆ; 40 ಕೆಜಿ ಚಿನ್ನ, 190 ಕೆಜಿ ಬೆಳ್ಳಿ ಜಪ್ತಿ!

ಹೈದರಾಬಾದ್‌; ತೆಲಂಗಾಣದಲ್ಲಿ ಚುನಾವಣೆ ನಡೆಯುತ್ತಿದ್ದು, ಎಲ್ಲೆಡೆ ಚುನಾವಣಾ ಅಕ್ರಮಗಳು ಜೋರಾಗಿ ನಡೆಯುತ್ತಿದೆ. ಇನ್ನೊಂದೆಡೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಎಲ್ಲೆಡೆ ತಪಸಾಣೆ ನಡೆಸುತ್ತಿದ್ದಾರೆ. ಈ ವೇಳೆ ಅಪಾರ ಪ್ರಮಾಣದಲ್ಲಿ ಅಕ್ರಮಗಳು ಪತ್ತೆಯಾಗುತ್ತಿವೆ. 

ತಪಾಸಣೆ ವೇಳೆ ಅಪಾರ ಪ್ರಮಾಣದ ನಗದು, ಚಿನ್ನ, ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾವುದೇ ದಾಖಲೆಗಳಿಲ್ಲದೆ ಹಾಗೂ ಚುನಾವಣಾ ನಿಯಮಕ್ಕೆ ವಿರುದ್ಧವಾಗಿ ಸಾಗಣೆ ಮಾಡುತ್ತಿರುವ ಆಸ್ತಿಯನ್ನು ಪೊಲೀಸರು ವಶಪಡಿಸಿಕೊಳ್ಳುತ್ತಿದ್ದಾರೆ. ನಲ್ಗೊಂಡ ಜಿಲ್ಲೆಯ ಚಿಟ್ಯಾಲ ರೈಲು ನಿಲ್ದಾಣದ ಕ್ರಾಸಿಂಗ್‌ನಲ್ಲಿ ಪೊಲೀಸರು ತಪಾಸಣೆ ನಡೆಸಿ 40 ಕೆಜಿ ಚಿನ್ನ ಮತ್ತು 190 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನು ಹೈದರಾಬಾದ್‌ನಿಂದ ವಿಜಯವಾಡಕ್ಕೆ ಹೋಗುವ ಎಪಿ 39 ಟಿಜಿ 8761 ಸಂಖ್ಯೆಯ ಬೊಲೆರೋ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ವಾಹನದಲ್ಲಿ 30 ಕೆ.ಜಿ ಚಿನ್ನಾಭರಣ ಹಾಗೂ 190 ಕೆ.ಜಿ ಬೆಳ್ಳಿಯ ಆಭರಣಗಳು ಪೊಲೀಸರಿಗೆ ಸಿಕ್ಕಿವೆ. ಟಿಎಸ್ 08 ಯುಜಿ 8122 ನಂಬರಿನ ಮತ್ತೊಂದು ವಾಹನದಲ್ಲಿದ್ದ 10 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೂಕ್ತ ದಾಖಲೆಗಳನ್ನು ತೋರಿಸದ ಕಾರಣ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಕಲೆಕ್ಟರೇಟ್‌ಗೆ ಕೊಂಡೊಯ್ದಿದ್ದಾರೆ.

ಎರಡು ದಿನಗಳ ಹಿಂದೆ ಸೂರ್ಯಪೇಟೆಯ ಉದ್ಯಮಿಯೊಬ್ಬರ ಮನೆಯಲ್ಲಿ 130 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪಟ್ಟಣದ ಮನೆಯೊಂದರಲ್ಲಿ ಇಟ್ಟಿದ್ದ ಬೆಳ್ಳಿ ಆಭರಣಗಳು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ರಾಜಸ್ಥಾನ ಮೂಲದ ಉದ್ಯಮಿಯೊಬ್ಬರ ಆಸ್ತಿ ಎಂದು ಪೊಲೀಸರು ಗುರುತಿಸಿದ್ದಾರೆ. ಸೂಕ್ತ ದಾಖಲೆಗಳಿಲ್ಲದ ಕಾರಣ ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.

Share Post