4 ದಿನದ ಬಿಡುವಿನ ನಂತರ ಮತ್ತೆ ಆರಂಭವಾದ ಭಾರತ್ ಜೋಡೋ ಯಾತ್ರೆ
ನಾರಾಯಣಪೇಟ್(ತೆಲಂಗಾಣ); ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ನಾಲ್ಕು ದಿನದ ವಿರಾಮದ ನಂತರ ಪುನಃ ಆರಂಭವಾಗಿದೆ. ಇಂದು ಬೆಳಗ್ಗೆ ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮಕ್ತಾಲ್‌ನಿಂದ ಯಾತ್ರೆ ಶುರುವಾಗಿದ್ದು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಅಕ್ಟೋಬರ್ 23ರಂದು ರಾಹುಲ್ ಗಾಂಧಿ ದೆಹಲಿಗೆ ತೆರಳಿದ್ದರು. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಿದ್ದರು. ನಿನ್ನೆ ರಾತ್ರಿ ಅವರು ವಾಪಾಸ್ಸಾಗಿದ್ದು, ಬೆಳಗ್ಗೆಯಿಂದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ, ಸಂಸದ ಉತ್ತಮ್ ಕುಮಾರ್ ರೆಡ್ಡಿ, ಸಿಎಲ್‌ಪಿ ನಾಯಕ ಭಟ್ಟಿ ವಿಕ್ರಮಾರ್ಕ ಸೇರಿದಂತೆ ಹಲವಾರು ತೆಲಂಗಾಣ ಕಾಂಗ್ರೆಸ್ ನಾಯಕರು ರಾಹುಲ್‌ಗೆ ಸಾಥ್ ನೀಡಿದ್ದಾರೆ.