Politics

ಸಿದ್ದರಾಮಯ್ಯ ನಿವಾಸಕ್ಕೆ ಬಂದ ಆ ನಾಯಕ!; ರಾಜ್ಯ ರಾಜಕಾರಣದಲ್ಲಿ ಕುತೂಹಲ!

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ನೇರವಾಗಿ ಹರಿಹಾಯುತ್ತಲೇ ಬಂದಿದ್ದರು.. ಅತಿ ಹಿಂದುಳಿದ ವರ್ಗಗಳ ಸಮಾವೇಶ ಮಾಡಿ, ಅಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದ್ದರು.. ಇದೀಗ ಅದೇ ಬಿ.ಕೆ.ಹರಿಪ್ರಸಾದ್‌ ಅವರು ಬದಲಾದ ರಾಜಕೀಯ ಕಾಲಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.. ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಮಾತುಕತೆ ನಡೆದಿದೆ.. ಇದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ..

ಇದನ್ನೂ ಓದಿ; ಪಾದಯಾತ್ರೆಯಲ್ಲಿ ಪ್ರೀತಂಗೌಡ ಎಂಟ್ರಿ ಏನು ಹೇಳುತ್ತೆ..?; ಜೆಡಿಎಸ್‌ ನಿಲುವೇನು..?

ಇತ್ತೀಚೆಗಷ್ಟೇ ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಸಚಿವರ ಜೊತೆ ಸಭೆ ನಡೆಸಿ ಹೋಗಿದ್ದರು.. ಅದಕ್ಕೂ ಮೊದಲು ಬಂದಿದ್ದ ಹೈಕಮಾಂಡ್‌ ನಾಯಕರು ಬಿ.ಕೆ.ಹರಿಪ್ರಸಾದ್‌ ಸೇರಿ ಹಲವರಿಂದ ಲೋಕಸಭಾ ಚುನಾವಣೆಯಲ್ಲಿ ಸೋಲಿಗೆ ಕಾರಣಗಳನ್ನು ತಿಳಿದುಕೊಂಡು ಹೋಗಿದ್ದರು.. ಈ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹರಿಪ್ರಸಾದ್‌ ಜೊತೆ ಸಿಎಂ ಸಿದ್ದರಾಮಯ್ಯ ಗುಪ್ತವಾಗಿ ಮಾತುಕತೆ ನಡೆಸಿರುವುದು ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ..

ಇದನ್ನೂ ಓದಿ; ಇಂದು ನಟ ನಾಗ ಚೈತನ್ಯ-ನಟಿ ಶೋಭಿತಾ ಧೂಳಿಪಾಳ್ಳ ನಿಶ್ಚಿತಾರ್ಥ!

ವಾರದ ಹಿಂದೆ ಬಿ.ಕೆ.ಹರಿಪ್ರಸಾದ್‌ ಅವರು ದೆಹಲಿಗೆ ಭೇಟಿ ನೀಡಿದ್ದರು.. ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ಮಾಡಿ ಬಂದಿದ್ದರು.. ರಾಜ್ಯ ರಾಜಕೀಯದ ಬಗ್ಗೆ ಅವರು ಹೈಕಮಾಂಡ್‌ ಜೊತೆ ಚರ್ಚಿಸಿದ್ದರು.. ಈ ನಡುವೆ ರಾಜ್ಯದಲ್ಲಿ ಎರಡು ಹಗರಣಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟು ಎದುರಾಗಿದೆ.. ಇದರ ಜೊತೆಗೆ ಕಾಂಗ್ರೆಸ್‌ ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ.. ಇಂತಹ ಪರಿಸ್ಥಿತಿಯಲ್ಲಿ ಹರಿಪ್ರಸಾದ್‌ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿರುವುದರ ಬಗ್ಗೆ ರಾಜಕೀಯ ವಲಯದಲ್ಲಿ ನಾನಾ ಚರ್ಚೆಗಳಾಗುತ್ತಿವೆ..

ಇದನ್ನೂ ಓದಿ; 13 ವರ್ಷದ ಹಿಂದೆ ಸತ್ತ ಗಂಡನಿಂದ ಮಗು ಪಡೆದಳಂತೆ ಈ ಮಹಿಳೆ!

 

Share Post