CrimeDistrictsPolitics

ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು!

ಮೈಸೂರು; ಮುಡಾದಲ್ಲಿ ಸಿಎಂ ಪತ್ನಿಗೆ ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ದೊಡ್ಡ ರಾದ್ಧಾಂತಕ್ಕೆ ಕಾರಣವಾಗಿದೆ.. ಈ ನಡುವೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ, ಕುಟುಂಬದವರ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲು ಮಾಡಲಾಗಿದೆ.. ನಕಲಿ ದಾಖಲೆ ಸೃಷ್ಟಿ ಮಾಡಿ ಮೂಡಾಗೆ ವಂಚನೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಸಿಎಂ ಬಾವಮೈದ ಮಲ್ಲಿಕಾರ್ಜುನಸ್ವಾಮಿ, ದೇವರಾಜು ಮತ್ತು ಅವರ ಕುಟುಂಬದವರ ವಿರುದ್ಧ ಈ ದೂರು ನೀಡಲಾಗಿದೆ..
ಸಾಮಾಜಿಕ ಕಾರ್ಯಕರ್ತ ಸ್ವೇಹಮಯಿ ಕೃಷ್ಣ ಎಂಬುವವರು ಈ ದೂರು ನೀಡಿದ್ದಾರೆ.. ಜಮೀನಿನ ನಕಲಿ ದಾಖಲೆ ಸೃಷ್ಟಿ ಮಾಡಿ, ಮೂಡಾಗೆ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದ್ದು, ಇದರಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಕೂಡಾ ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ.. ಈ ಬಗ್ಗೆ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ..
ಮುಖ್ಯಮಂತ್ರಿ ಪತ್ನಿ ಪಾರ್ವತಿಯವರ ಪ್ರಕರಣದಲ್ಲಿ ಭೂಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ನನಗೆ ಅನುಮಾನವಿದೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದು, ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ.

Share Post