BengaluruPolitics

ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಮೇಯ ಉದ್ಭವಿಸೋದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವ ಸಂಪುಟ ಹಾಗೂ ಕಾಂಗ್ರೆಸ್‌ ಪಕ್ಷ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲಿದೆ. ಅವರು ಸಿಎಂ ಆಗಿ ಮುಂದುವರೆಯಲಿದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್‌ ಅರ್ಜಿಗೂ ಮೊದಲೇ ಕೇವಿಯಟ್‌ ಸಲ್ಲಿಕೆ; ಸಿದ್ದರಾಮಯ್ಯಗೆ ಸಂಕಷ್ಟ ಫಿಕ್ಸ್‌?

ರಾಜಕೀಯವಾಗಿಯೂ ನಾವು ಹೋರಾಟ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲೂ ನಾವು ಫೈಟ್‌ ಮಾಡುತ್ತೇವೆ. ನಮಗೆ ಕಾನೂನಿನ ಬಗ್ಗೆ ಗೌರವ ಇದೆ, ರಕ್ಷಣೆ ಸಿಗುವ ನಂಬಿಕೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ. ಸರ್ಕಾರ, ಸಚಿವ ಸಂಪುಟ ಹಾಗೂ ಪಕ್ಷ ಸಿಎಂ ಬೆಂಬಲಕ್ಕಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾವು ರಾಜಕೀಯ ಪಿತೂರಿಯ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ.

ಇದನ್ನೂ ಓದಿ; ಮುಡಾ ಹಗರಣ; ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದ್ದೇನು..?

Share Post