BengaluruPolitics

ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ; ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ

ನವದೆಹಲಿ; ಇಂದು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಬೆಳಗ್ಗೆ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಲಿದೆ. ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ಕರೆದಿದೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ದೆಹಲಿಯಲ್ಲಿರುವ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ.

ಕಳೆದ ಚುನಾವಣೆ ಒಂದೇ ಹಂತದಲ್ಲಿ ನಡೆದಿತ್ತು. ಈ ಚುನಾವಣೆ ಕೂಡಾ ಒಂದೇ ಹಂತದಲ್ಲಿ ನಡೆಯುವ ಸಾಧ್ಯತೆ ಇದೆ.

Share Post