Politics

ಅಯೋಧ್ಯೆಯಿಂದ ಕಣಕ್ಕಿಳಿಯಲು ಯೋಗಿ ಆದಿತ್ಯನಾಥ್‌ ಸಿದ್ಧತೆ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಉತ್ತರ ಪ್ರದೇಶ ಸೇರಿ ಐದು ರಾಜ್ಯಗಳ ಚುನಾವಣೆಯಾಗಿದ್ದು, ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಬ್ಯುಸಿಯಾಗಿವೆ. ಬಿಜೆಪಿ ಕೂಡಾ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಮೊದಲ ಪಟ್ಟಿ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ.

ಮಾಹಿತಿಯ ಪ್ರಕಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಅಯೋಧ್ಯೆಯಿಂದ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಮೋದಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ, ಆಯೋಧ್ಯೆ ಅಲ್ಲದಿದ್ದರೆ ಮಥುರಾದಿಂದ ಯೋಗಿ ಸ್ಪರ್ಧಿಸಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ಅಂದಹಾಗೆ, ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರ ಕ್ಷೇತ್ರದಿಂದ ಐದು ಬಾರಿ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿದ್ದರು. ಆದ್ರೆ, ನರೇಂದ್ರ ಮೋದಿ ಕಳೆದ ಬಾರಿ ಯೋಗಿ ಆದಿತ್ಯನಾಥ್‌ರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದ್ದರು. ಆಗ ಯೋಗಿ, ಪರಿಷತ್‌ಗೆ ಆಯ್ಕೆಯಾಗಿ ಸಿಎಂ ಸ್ಥಾನ ಉಳಿಸಿಕೊಂಡಿದ್ದರು. ಹೀಗಾಗಿ ಈ ಬಾರಿ ವಿಧಾನಸಭೆಗೆ ಸ್ಪರ್ಧಿಸಿದರೆ, ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್‌ ವಿಧಾನಸಭೆಗೆ ಕಣಕ್ಕಿಳಿದಂತಾಗುತ್ತದೆ.

Share Post