ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರಗೆ ಜಾಮೀನು
ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಸಿಕ್ಕಿದೆ.. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದೆ..
ಷರತ್ತುಬದ್ಧ ಜಾಮೀನು ನೀಡಲಾಗಿದ್ದು, ನಾಳೆ ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.. ಮೂರು ತಿಂಗಳ ಹಿಂದೆ ನಾಗೇಂದ್ರ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.. ಇದೀಗ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ..