ಮನೆ ಕೆಲಸದವರು, ಪೊಲೀಸ್ ಅಧಿಕಾರಿಗಳ ಮೇಲೂ ದೌರ್ಜನ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ; ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ.. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿ ಮೆರೆಯಲಾಗಿದೆ.. 16 ವರ್ಷದಿಂದ 50 ವರ್ಷದವರೆಗಿನ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದ್ದು, ಮನೆ ಕೆಲಸದಾಕೆಯಿಂದ ಪೊಲೀಸ್ ಅಧಿಕಾರಿಗಳವರೆಗೆ ಇದರಲ್ಲಿದ್ದಾರೆ ಎಂದು ಆರೋಪ ಮಾಡಿದ್ದಾರೆ..
ಹೆದರಿಸಿ, ಬೆದರಿಸಿ ಈ ರೀತಿ ಮಾಡಿದ್ದಾರೇನೋ ಗೊತ್ತಿಲ್ಲ.. ಅವರು ವಿಕೃತ ಕಾಮಿಗಳು ಎಂದು ಸಚಿವರು ಆಕ್ರೋಶ ಹೊರಹಾಕಿದ್ದಾರೆ.. ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮುಖ್ಯ ಆರೋಪಿ, ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಬೇರೆ ಎಲ್ಲಾ ಪ್ರಕರಣಗಳ ಬಗ್ಗೆ ಬೀದಿಗಿಳಿಯುವ ಬಿಜಪಿ ನಾಯಕರು ಇದರ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ ಯಾಕೆ ಎಂದು ಲಕ್ಚ್ಮೀ ಹೆಬ್ಬಾಳ್ಕರ್ ಪ್ರಶ್ನೆ ಮಾಡಿದ್ದಾರೆ.. ವಿಪಕ್ಷ ನಾಯಕ ಹಾಗೂ ಬಿಜೆಪಿ ನಾಯಕ ಆರ್.ಅಶೋಕ್ ಈ ಬಗ್ಗೆ ಕೇಳಿದರೆ ಜೆಡಿಎಸ್ ಅವರನ್ನು ಕೇಳಿ ಎಂದು ಮಾಧ್ಯಮದವರಿಗೆ ಉತ್ತರ ನೀಡುತ್ತಿದ್ದಾರೆ.. ಹಾಗಾದ್ರೆ ಈ ಪ್ರಕರಣದ ಬಗ್ಗೆ ಬಿಜೆಪಿಯ ನಿಲುವೇನು ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ..