Politics

93 ಕ್ಷೇತ್ರಗಳಿಗೆ ಮತದಾನ; ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ವೋಟಿಂಗ್‌

ಬೆಂಗಳೂರು; ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದೆ.. ಇಂದು ದೇಶಾದ್ಯಂತ 94 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.. ಕರ್ನಾಟಕದಲ್ಲಿ ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಬರೆಯುತ್ತಿದ್ದಾರೆ.. ಬಹುತೇಕ ಎಲ್ಲಾ ಕಡೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ..

ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತದಾನ ಮಾಡಿದ್ದಾರೆ.. ಗುಜರಾತ್​ನ ಅಹಮದಾಬಾದ್​ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅವರು ಮತದಾನ ಮಾಡಿದ್ದಾರೆ.. ಇತತ್ತ  ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಶಿವಮೊಗ್ಗ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​ ಯಡಿಯೂರಪ್ಪ, ಕರ್ನಾಟಕದಲ್ಲಿ 25ರಿಂದ 26 ಸ್ಥಾನದಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು..

ರಾಜ್ಯದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ..

 

Share Post