ಮೋದಿ-ಡಿಕೆಶಿ ಭೇಟಿಯಲ್ಲಿ ನಡೆದ ಮಾತುಕತೆ ಏನು..?; ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದ್ದೇಕೆ..?
ಬೆಂಗಳೂರು; ಕಾಂಗ್ರೆಸ್ ಹೈಕಮಾಂಡ್‌ಗೆ ನೆಚ್ಚಿನ ನಾಯಕನಾಗಿದ್ದವರು ಡಿ.ಕೆ.ಶಿವಕುಮಾರ್.. ಹೈಕಮಾಂಡ್ ಹೇಳಿದ್ದನ್ನು ಚಾಚೂ ತಪ್ಪದೇ ಮಾಡುವುದರ ಮೂಲಕ ಅವರು ನಿಷ್ಠೆಯುಳ್ಳ ನಾಯಕ ಎಂದು ಕಾಂಗ್ರೆಸ್ ಹೈಕಮಾಂಡ್ ಭಾವಿಸಿತ್ತು.. ಆದ್ರೆ ಇದೀಗ ಅದೇ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡೆ ಬಗ್ಗೆ ಅಸಮಾಧಾನಗೊಂಡಿದೆ ಎಂದು ತಿಳಿದುಬಂದಿದೆ.. ಹೈಕಮಾಂಡ್ ನಾಯಕರಾದ ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೇವಾಲಾ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಗರಂ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.. ಇದಕ್ಕೆ ಕಾರಣ ಕಳೆದ ಬಾರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು..
ಪ್ರಧಾನಿ ಮೋದಿ ಭೇಟಿಗೆ ಅವರದೇ ಪಕ್ಷದ ಮುಖ್ಯಮಂತ್ರಿಗಳಿಗೂ ಅವಕಾಶ ಸಿಗೋದು ಕಷ್ಟ.. ಅಂತಾದ್ದರಿಂದ ಡಿ.ಕೆ.ಶಿವಕುಮಾರ್ ಅವರಿಗೆ ಹೇಗೆ ಪ್ರಧಾನಿ ಭೇಟಿಗೆ ಅವಕಾಶ ಸಿಕ್ತು ಅನ್ನೋ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಎದ್ದಿದೆ.. ಇನ್ನು ಸಿದ್ದರಾಮಯ್ಯ ಕಾನೂನು ಸಂಕಷ್ಟದಲ್ಲಿರುವ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಏನು ಮಾತನಾಡಿದರು ಎಂಬುದರ ಬಗ್ಗೆಯೂ ಅನುಮಾನ ಮೂಡಿದೆ ಎನ್ನಲಾಗ್ತಿದೆ.. ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಮೋದಿಯವರನ್ನು ಭೇಟಿಯಾಗಿದ್ದೆ ಎಂದು ಹೇಳಿದ್ದಾರಾದರೂ, ಈ ಬಗ್ಗೆ ಹೈಕಮಾಂಡ್‌ಗೆ ಅನುಮಾನ ಇದೆ ಎನ್ನಲಾಗಿದೆ.. ಹೀಗಾಗಿ ಡಿ.ಕೆ.ಶಿವಕುಮಾರ್ ಬಳಿ ಐದು ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅದಕ್ಕೆ ಡಿ.ಕೆ.ಶಿವಕುಮಾರ್‌ರಿಂದ ಉತ್ತರ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ..
ಮೋದಿಯವರ ಭೇಟಿಗೆ ಅವಕಾಶ ಸಿಕ್ಕಿದ್ದು ಹೇಗೆ, ಏಕೆ ನೀವು ಮೋದಿಯವರನ್ನು ಭೇಟಿ ಮಾಡಿದಿರಿ, ಇಂತಹ ಸಂದರ್ಭದಲ್ಲಿ ಅವರ ಭೇಟಿ ಅವಶ್ಯಕತೆ ಏನಿತ್ತು..? ರಾಜ್ಯ ಸಂಘಟನೆಯಲ್ಲಿದ್ದೀರಿ, ಡಿಸಿಎಂ ಆಗಿದ್ದೀರಿ. ಇಂತಹ ಸಂದರ್ಭದಲ್ಲಿ ಈ ಭೇಟಿ ಅನುಮಾನ ಹುಟ್ಟಿಸುತ್ತೆ ಎಂದು ಹೈಕಮಾಂಡ್ ಹೇಳಿದೆ ಎನ್ನಲಾಗಿದೆ.. ಇದಕ್ಕೆ ಉತ್ತರ ಕೊಟ್ಟಿರುವ ಡಿ.ಕೆ.ಶಿವಕುಮಾರ್, ನಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಕ್ಕಾಗಿ ನಾನು ಮೋದಿಯವರನ್ನು ಭೇಟಿಯಾಗಿದ್ದೆ. ಈ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ, ಇದರಲ್ಲಿ ರಾಜಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ..