Politics

ಬಿಜೆಪಿ ವಿರುದ್ಧ ತಿರುಗಿಬೀಳ್ತಾರಾ ಈಶ್ವರಪ್ಪ..?; ಶಿವಮೊಗ್ಗದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಚಿಂತನೆ!

ಶಿವಮೊಗ್ಗ; ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇದೆಯಾ..? ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವಿಗೆ ಬಿಜೆಪಿ ಹಿರಿಯ ನಾಯಕ ಕೆ.ಎಸ್‌.ಈಶ್ವರಪ್ಪ ಅಡ್ಡಿಯಾಗಲಿದ್ದಾರಾ..? ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೋದಕ್ಕೆ ಕೆ.ಎಸ್‌.ಈಶ್ವರಪ್ಪ ನಿರ್ಧಾರ ಮಾಡುತ್ತಿದ್ದಾರಾ..? ಅದೇನೋ ಗೊತ್ತಿಲ್ಲ.. ಆದ್ರೆ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.

ಪುತ್ರನಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಬೇಸರ;

ಪುತ್ರನಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಬೇಸರ; ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿತ್ತು.. ಇದರಿಂದ ಈಶ್ವರಪ್ಪ ಅವರು ಮುನಿಸುಕೊಂಡಿದ್ದರು.. ಆಗ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಮಾತನಾಡಿ ಮುನಿಸು ಶಮನ ಮಾಡಿದ್ದರು.. ಜೊತೆಗೆ ಈಶ್ವರಪ್ಪ ಅವರು ತಮ್ಮ ಪುತ್ರನಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಬಯಸಿದ್ದರು.. ಆದ್ರೆ ಕಾರಣಾಂತರಗಳಿಂದ ಟಿಕೆಟ್‌ ಸಿಗಲಿಲ್ಲ.. ಆದರೂ ಕೂಡಾ ಈಶ್ವರಪ್ಪ ಅವರು ಪಕ್ಷಕ್ಕಾಗಿ ದುಡಿದಿದ್ದರು.. ಇದೀಗ ಈಶ್ವರಪ್ಪ ಅವರು ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಲೋಕಸಭಾ ಟಿಕೆಟ್‌ ಬಯಸುತ್ತಿದ್ದಾರೆ.. ಆದ್ರೆ ಹಾವೇರಿಯಿಂದ ಮಾಜಿ ಸಿಎಂ ಬಸವ್ರಾಜ ಬೊಮ್ಮಾಯಿಯವರನ್ನು ಕಣಕ್ಕಿಳಿಸೋದು ಬಹುತೇಕ ಫೈನಲ್‌ ಆಗಿದೆ. ಇದರಿಂದ ಬೇಸರಗೊಂಡಿರುವ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರನಾಗಿ ಕಣಕ್ಕಿಳಿದು, ಯಡಿಯೂರಪ್ಪ ಪುತ್ರನಿಗೆ ಸೋಲುಣಿಸುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ‌

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಈಶ್ವರಪ್ಪ;

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಈಶ್ವರಪ್ಪ; ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.. ಆದ್ರೆ ಮಗನಿಗೆ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರನಾಗಿ ಕಣಕ್ಕಿಳಿಯುವ ಬಗ್ಗೆ ಈಶ್ವರಪ್ಪ ಚಿಂತನೆ  ನಡೆಸಿದ್ದಾರೆ ಎನ್ನಲಾಗಿದೆ. ಅವರು ತಮ್ಮ ಬೆಂಬಲಿಗರ ಬಗ್ಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದೂ ಹೇಳಲಾಗುತ್ತಿದೆ.

ಪ್ರಮುಖ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡ್ತಾರಾ ಈಶ್ವರಪ್ಪ?;

ಪ್ರಮುಖ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡ್ತಾರಾ ಈಶ್ವರಪ್ಪ?; ಇಂದು ಬಹುತೇಕ ಬಿಜೆಪಿ ಟಿಕೆಟ್‌ ಘೋಷಣೆಯಾಗಬಹುದು.. ಹೀಗಾಗಿ ಅದಕ್ಕಾಗಿ ಈಶ್ವರಪ್ಪ ಕಾಯುತ್ತಿದ್ದಾರೆ  ಎನ್ನಲಾಗಿದೆ. ಬಹುತೇಕ ಈಶ್ವರಪ್ಪ ಮಗನಿಗೆ ಟಿಕೆಟ್‌ ಮಿಸ್‌ ಆಗಿದೆ.. ಅದು ಈಶ್ವರಪ್ಪ ಅವರಿಗೂ ಗೊತ್ತಿದೆ.. ಹೀಗಾಗಿ ಈಶ್ವರಪ್ಪ ಬೇಸರ ಮಾಡಿಕೊಂಡಿದ್ದಾರೆ. ಈ ಬೇಸರದಲ್ಲೇ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡೋದಕ್ಕೆ ಮುಂದಾಗಿದ್ದಾರೆ ಎನ್ನಲಾಗ್ತಿದೆ.. ಇದಕ್ಕಾಗಿ ಕಾರ್ಯಕರ್ತರ ಅಭಿಪ್ರಾಯ ತಿಳಿದುಕೊಳ್ಳಲು ಅವರು ಮುಂದಾಗಿದ್ದಾರಂತೆ. ಶಿಕಾರಿಪುರ, ಸಾಗರ, ಭದ್ರಾವತಿ, ಶಿವಮೊಗ್ಗ ಮತ್ತಿತರ ಕಡೆ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆಂದು ಹೇಳಲಾಗುತ್ತಿದೆ. ಶಿವಮೊಗ್ಗ ಕ್ಷೇತ್ರದ ವ್ಯಾಪ್ತಿಯ ವಿವಿಧ ಸಮಾಜದ ಪ್ರಮುಖರು ಹಾಗೂ ಪಕ್ಷದ ಮುಖಂಡರ ಸಭೆ ನಡೆಸಲು ಈಶ್ವರಪ್ಪ ನಿರ್ಧರಿಸಿದ್ದಾರೆ.. ಈ ಮೂಲಕ ಬಿಜೆಪಿ ಹೈಕಮಾಂಡ್ ಹಾಗೂ ತಮ್ಮ ಆಪ್ತ ಯಡಿಯೂರಪ್ಪನವರಿಗೆ ಟಾಂಗ್ ನೀಡಲು ರಣತಂತ್ರ ಶುರುವಾಗಿದೆ ಎನ್ನಲಾಗಿದೆ.

ಇಬ್ಬರ ಜಗಳದಲ್ಲಿ ಗೀತಾ ಶಿವರಾಜ್‌ಕುಮಾರ್‌ಗೆ ಲಾಭವಾಗುತ್ತಾ..?;

ಇಬ್ಬರ ಜಗಳದಲ್ಲಿ ಗೀತಾ ಶಿವರಾಜ್‌ಕುಮಾರ್‌ಗೆ ಲಾಭವಾಗುತ್ತಾ..?; ಈಶ್ವರಪ್ಪ ಅವರು ಮುನಿಸಿಕೊಂಡು ಏನಾದರೂ ಪಕ್ಷೇತರರಾಗಿ ಸ್ಪರ್ಧೆ ಮಾಡಿದರೆ ಅದು ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗೆ ಲಾಭವಾಗೋ ಸಾಧ್ಯತೆ ಇದೆ.. ಈಶ್ವರಪ್ಪ ಸ್ಪರ್ಧೆ ಮಾಡಿದರೆ ಬಿಜೆಪಿ ಮತಗಳು ವಿಭಜನೆಯಾಗಲಿವೆ.. ಆಗ ಗೀತಾ ಶಿವರಾಜ್‌ಕುಮಾರ್‌ ಗೆಲ್ಲೋದಕ್ಕೆ ಅನುಕೂಲವಾಗಿಬಿಡುತ್ತದೆ.. ಹೀಗಾಗಿ, ಈಶ್ವರಪ್ಪ ಅವರನ್ನು ಸಮಾಧಾನ ಮಾಡೋದಕ್ಕೆ ಬಿಜೆಪಿ ಹೈಕಮಾಂಡ್‌ ಯಾವ ರೀತಿಯ ತಂತ್ರಗಾರಿಕೆ ನಡೆಸುತ್ತೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ..

 

 

Share Post