DistrictsPolitics

ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಬರಲ್ಲ; ಯತ್ನಾಳ್‌

ಬೆಳಗಾವಿ; ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಯಸಿದ್ದರು. ಆದ್ರೆ ಎರಡೂ ಹುದ್ದೆಗಳು ಅವರಿಗೆ ಸಿಕ್ಕಿಲ್ಲ. ಹೀಗಾಗಿ, ಈ ಬಗ್ಗೆ ಅವರು ಮುನಿಸಿಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಆದ್ರೆ ಈಗ ಅವರಿಗೆ ಮುನಿಸು ಕಡಿಮೆಯಾಗಿಲ್ಲ. ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಬದಲಾವಣೆ ಮಾಡೋವರೆಗೂ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗೋಲ್ಲ ಎಂದು ಎಂದು ಅವರು ಖಡಕ್ಕಾಗಿ ಹೇಳಿಬಿಟ್ಟಿದ್ದಾರೆ.

ವಿಪಕ್ಷ ನಾಯಕ ಸ್ಥಾನ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಎರಡರಲ್ಲಿ ಒಂದನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು. ಅಲ್ಲಿಯತನಕ ನಾನು ಬಿಜೆಪಿ ಶಾಸಕಾಂಗ ಪಕ್ಚದ ಸಭೆಗೆ ಬರೋದಿಲ್ಲ ಅಂತ ಬೆಳಗಾವಿಯಲ್ಲಿ ಯತ್ನಾಳ್‌ ಹೇಳಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕು. ದಕ್ಷಿಣ ಭಾಗದವರಿಗೆ ನ್ಯಾಯ ಕೊಟ್ಟರೆ, ನಾನು ಆ ಭಾಗದ ನಾಯಕರ ಗುಲಾಮರಲ್ಲ ಎಂದು ಹೇಳಿದ್ದಾರೆ.

ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ ಎಂದೂ ಯತ್ನಾಳ್‌ ಹೈಕಮಾಂಡ್‌ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Share Post