ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಮಪತ್ರ; ಅಖಾಡಕ್ಕೆ ರೆಡಿಯಾದ್ರಾ ನಿಖಿಲ್..?
ಚನ್ನಪಟ್ಟಣ; ನಿನ್ನೆಯಷ್ಟೇ ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಇಂದು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.. ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮೂಲಕ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದರು.. ರೋಡ್ ಶೋನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು..
ಇದೇ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಯೋಗೇಶ್ವರ್ ಅವರನ್ನು ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.. ಕೆರೆಗಳಿಗೆ ಜೀವ ತುಂಬಿದ ಯೋಗೇಶ್ವರ್ ಅಭಿವೃದ್ಧಿ ಪರವಾಗಿ ಇರುವವರು. ಅವರು ಕಾಂಗ್ರೆಸ್‌ಗೆ ಮರಳಿದ್ದಾರೆ.. ನಾವೆಲ್ಲಾ ಅವರನ್ನು ಸ್ವಾಗತ ಮಾಡಿದ್ದೇವೆ.. ಯೋಗೇಶ್ವರ್‌ರನ್ನು ಚನ್ನಪಟ್ಟಣದ ಜನ ಗೆಲ್ಲಿಸುವ ಮೂಲಕ ಚನ್ನಪಟ್ಟಣ ಅಭಿವೃದ್ಧಿಗೆ ಮರು ಚಾಲನೆ ನೀಡಬೇಕೆಂದು ಮನವಿ ಮಾಡಿದರು..
ಕುಮಾರಸ್ವಾಮಿಯವರು ಈಗಾಗಲೇ ಚನ್ನಪಟ್ಟಣ ಮರೆತಿದ್ದು, ಅವರು ಮಂಡ್ಯಕ್ಕೆ ಸೀಮಿತವಾಗಿದ್ದಾರೆ.. ಮೈತ್ರಿಕೂಟದಿಂದ ಕುಮಾರಸ್ವಾಮಿಯೇ ಸ್ಪರ್ಧಿಸಲಿ ಅಥವಾ ನಿಖಿಲ್, ಅನಿತಾ ಅವರೇ ಅಖಾಡಕ್ಕಿಳಿಯಲಿ ಯೋಗೇಶ್ವರ್ ಜಯ ಗಳಿಸೋದು ಪಕ್ಕಾ ಎಂಬ ವಿಶ್ವಾಸವನ್ನು ಸಿಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದರು..
ಇನ್ನು ಮಾಹಿತಿಗಳ ಪ್ರಕಾರ ಜೆಡಿಎಸ್ ನಾಯಕರು ನಿಖಿಲ್ ಕುಮಾರಸ್ವಾಮಿಯವರನ್ನೇ ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ.. ಆದ್ರೆ ಇನ್ನೂ ಕೂಡಾ ಅಧಿಕೃತವಾಗಿ ಪ್ರಕಟಣೆ ಮಾಡಿಲ್ಲ..