NationalPolitics

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ವೈಎಸ್‌ಆರ್‌ ಪುತ್ರಿ ಶರ್ಮಿಳಾ

ನವದೆಹಲಿ; ವೈಎಸ್‌ಆರ್‌ ತೆಲಂಗಾಣ ಪಾರ್ಟಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಜೊತೆ ವಿಲೀನ ಮಾಡಲಾಗಿದೆ. ಇಂದು ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಮುಖ್ಯಸ್ಥೆ ವೈ.ಎಸ್‌.ಶರ್ಮಿಳಾ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡಲಾಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್‌ ಸೇರಿದ್ದಾರೆ. ನಮ್ಮ ನಾಯಕರು ಯಾವ ಜವಾಬ್ದಾರಿ ನೀಡಿದರೂ ನಾನು ಅದನ್ನು ನಿಭಾಯಿಸುತ್ತೇನೆ. ನಾನು ಕಾಂಗ್ರೆಸ್‌ ಸೇರಿರುವುದನ್ನು ನೋಡಿ ನಮ್ಮ ತಂದೆ ರಾಜಶೇಖರರೆಡ್ಡಿ ಆತ್ಮ ಸಂತೋಷಪಡುತ್ತಿರುತ್ತದೆ ಎಂದು ಶರ್ಮಳಾ ಇದೇ ವೇಳೆ ಹೇಳಿದ್ದಾರೆ.

 

Share Post