ಮೇಕೆದಾಟು ಪಾದಯಾತ್ರೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ
ಕನಕಪುರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅದ್ದೂರಿ ಚಾಲನೆ ಸಿಕ್ಕಿದೆ. ಸ್ವಾಮೀಜಿಗಳು, ಪಾದ್ರಿಗಳು, ಮೌಲ್ವಿಗಳು ಗಿಡಕ್ಕೆ ನೀರು ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.
ಕನಕಪುರದ ಸಂಗಮದಿಂದ ಪಾದಯಾತ್ರೆ ಆರಂಭವಾಗಲಿದೆ. ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ನೂರಾರು ಜನರು ಪಾದಯಾತ್ರೆಗೆ ಆಗಮಿಸಿದ್ದಾರೆ. ನಾಯಕರು ಸೇರಿ ಎಲ್ಲರೂ ಮಾಸ್ಕ್ ಕೂಡಾ ಧರಿಸಿಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೊವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದರು. ಆದ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದವರಲ್ಲಿ ಬಹುತೇಕರು ಮಾಸ್ಕ್ ಧರಿಸಿಯೇ ಇಲ್ಲ.