Sports

ಎರಡನೇ ಬಾರಿ ಟಿ-20 ವಿಶ್ವಕಪ್ ಗೆದ್ದ ಭಾರತ

ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.

 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.

Share Post