Sports

ಇಂದಿನಿಂದ ಟೆಸ್ಟ್‌ ಸರಣಿಗೆ ಚಾಲನೆ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಇಂದಿನಿಂದ ಶುರುವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಮೂಲಕ ಸರಣಿಗೆ ಚಾಲನೆ ಸಿಗಲಿದೆ. ಆಫ್ರಿಕಾ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಹೀಗಾಗಿ ಭಾರತ ತಂಡಕ್ಕೆ ಈ ಸರಣಿ ಮುಖ್ಯವಾಗಿದೆ. ಅಲ್ಲದೆ ಹರಿಯಣಗಳ ನೆಲದಲ್ಲಿ ಭಾರತ ಇದುವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ಐತಿಹಾಸಿಕ ಸಾಧನೆ ಮಾಡುವ ಅವಕಾಶ ಕೂಡ ಇದೆ. ಇದಕ್ಕಾಗಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸಾರಥ್ಯದಲ್ಲಿ ವಿಶೇಷ ಪ್ಲಾನ್ ಕೂಡ ರೂಪಿಸಿದಂತಿದೆ.ಸದ್ಯಕ್ಕೆ ಸೆಂಚೂರಿಯನ್‌ನ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿರುವ ಭಾರತ ತಂಡ, ಸೂಪರ್‌ಸ್ಪೋರ್ಟ್ ಪಾಕ್ ಮೈದಾನದಲ್ಲಿ ಕಳೆದ ಒಂದು ವಾರದಿಂದ ಅಭ್ಯಾಸ ನಡೆಸುತ್ತಿದೆ. ಅದರಲ್ಲೂ ಕ್ರೀಡಾಂಗಣದ ಸೆಂಟರ್ ಪಿಚ್‌ನಲ್ಲಿ ಅಭ್ಯಾಸ ನಡೆಸುವ ಅವಕಾಶವನ್ನು ಕಲ್ಪಿಸಲಾಗಿದೆ. ಟ್ರೈನಿಂಗ್ ಸೆಷನ್​ನಲ್ಲಿ ಆರ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸಿದರೆ, ನೆಟ್ ಸೆಷನ್ ನಲ್ಲಿ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ಬ್ಯಾಟಿಂಗ್ ಪ್ರಾಕ್ಟೀಸ್ ಬೆವರಿಳಿಸಿದರು.

Share Post