ಇಂದಿನಿಂದ ಭಾರತ ಹಾಗೂ ದ.ಆಫ್ರಿಕಾ ನಡುವಿನ ಏಕದಿನ ಸರಣಿ
ಕೇಪ್‌ಟೌನ್ : ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭಗೊಳ್ಳಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2ಗಂಟೆಗೆ ಪಂದ್ಯ ಆರಂಭವಾಗಲಿದೆ.
ಟೆಸ್ಟ್ ಸರಣಿಯಲ್ಲಿ ಸೋಲು ಅನುಭವಿಸಿದ ಭಾರತಕ್ಕೆ ಇದು ಪ್ರತಿಷ್ಠೆಯ ಕಣವಾಗಿದೆ. ಐತಿಹಾಸಿಕ ಗೆಲುವು ಸಾಧಿಸುವ ಅವಕಾಶ ಕಳೆದುಕೊಂಡ ಭಾರತವು ಏಕದಿನ ಸರಣಿಯನ್ನಾದರೂ ಗೆಲ್ಲಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ.
ಮೂರು ಏಕದಿನ ಪಂದ್ಯಗಳನ್ನು ಆಡಲಿರುವ ಭಾರತವನ್ನು, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಕೆ ಎಲ್ ರಾಹುಲ್ ಇದೇ ಮೊದಲ ಬಾರಿಗೆ ಸರಣಿ ಒಂದಕ್ಕೆ ಪೂರ್ಣಪ್ರಮಾಣದ ನಾಯಕರಾಗಿ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಜಸ್ಪ್ರೀತ್ ಬೂಮ್ರಾ ಅವರನ್ನು ಉಪನಾಯಕರನ್ನಾಗಿ ಬಿಸಿಸಿಐ ಘೋಷಿಸಿದೆ.
ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಭಾರತ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಮೊದಲ ಏಕದಿನ ಪಂದ್ಯ ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆಯಲಿದೆ.
ಪ್ರೆಸ್ ಮೀಟ್‌ನಲ್ಲಿ ಮಾತನಾಡಿದ ರಾಹುಲ್ ಅಂತಿಮ ೧೧ ಆಟಗಾರರ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ ಹೆಸರು ಕಾಣಿಸಿಕೊಳ್ಳುವ ಸುಳಿವು ನೀಡಿದ್ದಾರೆ.