ಆಫ್ರಿಕಾ – ಫುಟ್ಬಾಲ್ ಪಂದ್ಯದ ವೇಳೆ ನೂಕು ನುಗ್ಗಲು – 6 ಸಾವು
ಆಫ್ರಿಕಾ : ಆಪ್ರಿಕನ್ ಕಪ್ ಆಫ್ ನೇಷನ್ಸ್‌ನ ಪಂದ್ಯಾವಳಿಯ ಕೊನೆಯ ನಾಕೌಟ್ ಪಂದ್ಯದಲ್ಲಿ ಆತಿಥೇಯ ಕೊಮೊರೊಸ್ ತಂಡವು ಆಡುವುದನ್ನು ನೋಡಲು ಸಾಕಷ್ಟು ಜನ ಯೌಂಡೆಯಲ್ಲಿರುವ ಒಲೆಂಬೆ ಸ್ಟೇಡಿಯಂಗೆ ಪ್ರವೇಶ ಪಡೆಯಲು ಬಂದಿದ್ದರು. ಈ ಸಂದರ್ಭದಲ್ಲಿ ಸಂಭವಿಸಿದ ನೂಕು ನುಗ್ಗಲು ಕಾರಣ ಕಾಲ್ತುಳಿಕ್ಕೆ ಸಿಕ್ಕಿ ಆರು ಜನ ಸಾವನ್ನಪ್ಪಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಕೆಮರೂನ್‌ನ ಗವರ್ನರ್ ನಾಸೆರಿ ಪಾಲ್ ಬಿಯಾ ತಿಳಿಸಿದ್ದಾರೆ. ಸದ್ಯಕ್ಕೆ ಸಾವು ನೋವಿನ ಬಗ್ಗೆ ತಿಳಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ.
40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
60000 ಆಸನ ಉಳ್ಳ ಕ್ರೀಡಾಂಗಣದಲ್ಲಿ ಕೊರೊನಾ ಕಾರಣದಿಂದ ಶೇ.80ರಷ್ಟು ಆಸನಗಳ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ 50000 ಕ್ಕೂ ಹೆಚ್ಚು ಜನ ಕ್ರೀಡಾಂಗಣಕ್ಕೆ ಬಂದ ಕಾರಣ ಗೇಟ್‌ಗಳನ್ನು ಮುಚ್ಚಲಾಗಿದೆ. ಇದರಿಂದ ಜನರು ಕಾಲ್ತುಳಿತಕ್ಕೆ ಸಿಕ್ಕಿದ್ದಾರೆ. ಮಕ್ಕಳು ಕೂಡ ಕಾಲ್ತುಳಿತಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.