Sports

ಏಷ್ಯಾ ಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಭಾಗವಹಿಸಲ್ಲ

ನವದೆಹಲಿ; 2023ರ ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳದಿರಲು ನಿರ್ಧಾರ ಮಾಡಿದೆ. ಈ ವಿಚಾರವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಹೇಳಿದ್ದಾರೆ.

ಇಂದು ಮುಂಬೈನಲ್ಲಿ 91ನೇ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಅನಂತರ ಜಯ್​ ಶಾ ಮಾತನಾಡಿ, ಏಷ್ಯಾಕಪ್​ ಟೂರ್ನಿಗಾಗಿ ಟೀ ಇಂಡಿಯಾ,  ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

2023ರ ಏಷ್ಯಾ ಕಪ್  ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಏಷ್ಯಾ ಕಪ್‌ ಟೂರ್ನಿಯನ್ನು ಪಾಕ್‌ ಬದಲಾಗಿ ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡಬೇಕು ಎಂದೂ ಬಿಸಿಸಿಐ ಮಾನವಿ ಮಾಡಿದೆ.

Share Post