Sports

IPL 2022 Mega Auction : ಸಾವಿರಕ್ಕೂ ಹೆಚ್ಚು ಆಟಗಾರರು ಭಾಗಿ

ಬೆಂಗಳೂರು : ಐಪಿಎಲ್‌ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದೆ. ಫೆಬ್ರುವರಿಯಲ್ಲಿ ಈ ಮೆಗಾ ಆಕ್ಷನ್‌ ಅನ್ನು ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ನಡೆಯಲಿದೆ. ಈ ಮೆಗಾ ಹರಾಜಿನಲ್ಲಿ ಸಾವಿರಕ್ಕೂ ಹೆಚ್ಚಿನ ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಜನವರಿ 17 ರೊಳಗೆ ಕಳುಹಿಸುವಂತೆ ಬಿಸಿಸಿಐ ಎಲ್ಲಾ ಕ್ರಿಕೆಟ್ ಮಂಡಳಿಗಳಿಗೆ ಸೂಚಿಸಿದೆ.

ಈ ಬಾರಿ ಎರಡು ಹೊಸ ತಂಡಗಳ ಸೇರ್ಪಡೆಯ ಕಾರಣ ಮತ್ತಷ್ಟು ಆಟಗಾರರಿಗೆ ಅವಕಾಶ ದೊರೆಯಲಿದೆ. ಈದರಿಂದ ನೋಂದಣಿ ಮಾಡಿಕೊಳ್ಳುವ ಆಟಗಾರರ ಪಟ್ಟಿಯೂ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ.

 

Share Post