Sports

ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ರೋಜರ್‌ ಬಿನ್ನಿ ಆಯ್ಕೆ

ಮುಂಬೈ; ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಬಿನ್ನಿ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರನ್ನೇ ಆಯ್ಕೆ ಮಾಡಲಾಗಿದೆ. ಸೌರವ್ ಗಂಗೂಲಿ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಮಾಡಲಾಗಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ 2ನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದು, ರಾಜೀವ್ ಶುಕ್ಲ ಬಿಸಿಸಿಐ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.

ರೋಜರ್ ಬಿನ್ನಿ 1979ರಿಂದ 1987ರವರೆಗೆ ಟೀಂ ಇಂಡಿಯಾದಲ್ಲಿ ಸೇವೆ ಸಲ್ಲಿಸಿದ್ದರು.

Share Post