Sports

ದ.ಆಫ್ರಿಕಾ ಟೆಸ್ಟ್‌ ಸರಣಿಯಿಂದ ರೋಹಿತ್‌ ಔಟ್

ಮುಂಬೈ : ದ.ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನವೇ ರೋಹಿತ್‌ ಶರ್ಮ ತಂಡದಿಂದ ಹೊರಬಿದ್ದಿದ್ದಾರೆ. ಪ್ರವಾಸಕ್ಕೆ ಹೊರಡುವ ಮುನ್ನ ಮೂರು ದಿನಗಳ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದ ರೋಹಿತ್‌ ಅವರಿಗೆ ಗಾಯದ ಸಮಸ್ಯೆ ಎದುರಾಗಿದೆ.

ಶಿಬಿರದಲ್ಲಿ ತರಬೇತಿ ನಡೆಸುವಾಗ ಗಾಯಕ್ಕೆ ತುತ್ತಾಗಿರುವ ರೋಹಿತ್‌ ಶರ್ಮ ಟೆಸ್ಟ್‌ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ. ರೋಹಿತ್‌ ಜಾಗಕ್ಕೆ ಪ್ರಿಯಾಂಕ್ ಪಾಂಚಾಲ್ ಅವರನ್ನು ಆಯ್ಕೆ ಮಾಡಲಾಗಿದೆ.  ಈ ಕುರಿತು ಬಿಸಿಸಿಐ ಟ್ವೀಟ್‌ ಮಾಡಿದೆ.

Share Post