Sports

ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಶ್ರೇಯಸ್‌ ಅಯ್ಯರ್‌ಗೆ ಸಿಕ್ತು ಭರ್ಜರಿ ಗಿಫ್ಟ್‌

ಬೆಂಗಳೂರು : ಟೀಮ್‌ ಇಂಡಿಯಾದ ಯುವ ಪ್ರತಿಭೆ ಶ್ರೇಯಸ್‌ ಅಯ್ಯರ್‌ ಅವರು ಇಂದು ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ಕಾನ್ಪುರದ ಗ್ರೀನ್‌ ಪಾರ್ಕ್‌ ನಲ್ಲಿ  ಇಂದಿನಿಂದ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ಆಡುತ್ತಿದ್ದಾರೆ. ಇಲ್ಲಿ ಮತ್ತೊಂದು ವಿಶೇಷ ನಡೆದಿದೆ.

ಪಂದ್ಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ಅವರನ್ನು ಕ್ರೀಡಾಂಗಣದಲ್ಲಿ ಭೇಟಿಯಾದ ಟೀಂ ಇಂಡಿಯ ಆಟಗಾರರು, ಅವರಿಂದ ಸಲಹೆ ಸೂಚನೆಗಳನ್ನು ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶ್ರೇಯಸ್‌ ಅಯ್ಯರ್‌ ಅವರಿಗೆ ಅಭಿನಂದನೆ ತಿಳಿಸಿ‌, ಟೆಸ್ಟ್‌ ಕ್ಯಾಪ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಶ್ರೇಯಸ್‌ ಅಯ್ಯರ್ ಕ್ಯಾಪ್‌ಗೆ ಮುತ್ತಿಟ್ಟು ತಲೆಗೆ‌ ಏರಿಸಿಕೊಂಡಿದ್ದಾರೆ.

ಈ ವಿಡಿಯೋವನ್ನು ಬಿಸಿಸಿಐ ಅವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದ್ದಾರೆ

Share Post