ಸೌರವ್ ಗಂಗೂಲಿಗೆ ಕೋವಿಡ್ ಸೋಂಕು ದೃಢ
ಕೋಲ್ಕತ್ತ : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಮವಾರ ತಡರಾತ್ರಿ ಅವರನ್ನು ಖಾಸಗಿ ಹಾಸ್ಪಿಟಲ್‌ಗೆ ಅಡ್ಮಿಟ್ ಮಾಡಲಾಗಿದೆ. ಕೋವಿಡ್‌ನ ಯಾವ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲವಾದರೂ ದೈಹಿಕವಾಗಿ ತುಸು ದಣಿದಿದ್ದಾರೆ ಎಂದು ವರದಿಯಾಗಿದೆ.
ವಿರಾಟ್ ಕೊಹ್ಲಿ ವಿವಾದಕ್ಕೆ ಸಂಬಂಧಿಸಿದ ಹಾಗೆ ಸೌರವ್ ಗಂಗೂಲಿಯನ್ನು ಕೆಲವರು ಟೀಕಿಸಿದ್ದರು. ಇದ್ಯಾವುದನ್ನು ತಲೆಗೆ ಹಾಕಿಕೊಳ್ಳದ ಸೌರವ್ ತಮ್ಮ ಕೆಲಸದಲ್ಲಷ್ಟೇ ನಿರತರಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಂಗೂಲಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಗಂಗೂಲಿ ಅವರಿಗೆ ಎರಡನೇ ಬಾರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಸೋಮವಾರ ಸಂಜೆ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಆರಾಮಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆರ್‌ಟಿಪಿಸಿಆರ್ ಟೆಸ್ಟ್‌ನಲ್ಲಿ ಪಾಸಿಟಿವ್ ಬಂದಿದೆ. ಜಿನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ಗೂ ಕಳುಹಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಸೌರವ್ ಗಂಗೂಲಿಯವರು ಈ ವರ್ಷದಲ್ಲಿ ಇದು ಮೂರನೇ ಬಾರಿ ಆಸ್ಪತ್ರೆಗೆ ದಾಖಲಾಗಿರೋದು. ವರ್ಷದ ಆರಂಭದಲ್ಲಿ ಗಂಗೂಲಿ ಲಘು ಹೃದಯಾಘಾತಕ್ಕೆ ಒಳಗಾಗಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದರಯ. ಅನಂತರವೂ ಒಮ್ಮೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆ ದಾಖಲಾಗಿದ್ದರು. ಈ ವೇಳೆ ಎರಡು ಸ್ಟೆಂಟ್‌ಗಳನ್ನು ಅಳವಡಿಸಲಾಗಿತ್ತು.